ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18 ರಿಂದ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಂತರ ಅಭ್ಯರ್ಥಿಗಳ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಿದ್ದುಪಡಿಗಾಗಿ ಕೋರಿಕೆ ಸಲ್ಲಿಸುತ್ತಿದ್ದಾರೆ. ಆದರೆ ಈ ಹಂತದಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗುವುದಿಲ್ಲ. ಸಿಇಟಿ ಪರೀಕ್ಷೆಯ ನಂತರ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕೆಇಎ ತಿಳಿಸಿದೆ.
1. ಸಿಇಟಿ-2024 ಆನ್‌ಲೈನ್ ಅರ್ಜಿಯಲ್ಲಿನ ಮಾಹಿತಿಗಳನ್ನು ದಿನಾಂಕ 01-04-2024 ರಿಂದ ತಿದ್ದುಪಡಿ ಮಾಡಿಕೊಳ್ಳಬಹುದೆಂದು ತಿಳಿಸಲಾಗಿತ್ತು.
2. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತುತ ಸಿಇಟಿ-2024 ರ ಆನ್‌ಲೈನ್ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಡಿಕೊಳ್ಳಲು ಸಿಇಟಿ-2024 ಪರೀಕ್ಷೆಯ ತೆರೆಯಲಾಗುವುದು. ನಂತರ ಪೋರ್ಟ್‌ಲ್ ಅನ್ನು ತೆರೆಯಲಾಗುವುದು.
3.ನವೀಕೃತ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟಿಗೆ http://kea.kar.nic.in ಭೇಟಿ ನೀಡುತ್ತಿರಲು ಸೂಚಿಸಿದೆ.