ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR) ಅನುಷ್ಠಾನಗೊಳಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸರ್ಕಾರಿ ನೌಕರರ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ E-SR ನಲ್ಲಿಯೇ ಮುಂದುವರೆಸಲು ತಿಳಿಸಲಾಗಿದೆ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR)ನಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಗಿರುತ್ತದೆ.
ಈ ಹಿನ್ನಲೆಯಲ್ಲಿ, ಸೇವಾ ವಹಿಯನ್ನು Electronic Service Register (ESR) ನಲ್ಲಿ ಅನುಷ್ಠಾನಗೊಳಿಸುವ ಕುರಿತು ಈಗಾಗಲೇ ಆನ್ ಲೈನ್‌ನಲ್ಲಿ, ಹೆಚ್.ಆರ್.ಎಂ.ಎಸ್ -2 ನಿಂದ ತರಬೇತಿ ನೀಡಲಾಗಿರುತ್ತದೆ. ಆದರೂ ಸಹ ಇದುವರೆಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ | ಸಿಬ್ಬಂದಿಗಳಲ್ಲಿ ಒಟ್ಟಾರೆ 01 ಸೇವಾಪುಸ್ತಕ ಮಾತ್ರ ವಿದ್ಯುನ್ಮಾನ ಸೇವಾವಹಿಯಲ್ಲಿ [Electronic Service Register” (ESR)] ಪ್ರಕಟಿಸಿರುವುದು ಕಂಡು ಬಂದಿರುತ್ತದೆ. ಈ ವಿಷಯನ್ನು ಇಲಾಖೆಯು ಗಂಭೀರವಾಗಿ
ಪರಿಗಣಿಸಿದೆ.
ಆದ್ದರಿಂದ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು ದಿನಾಂಕ: 15-11-2025 ರೊಳಗಾಗಿ ವಿದ್ಯುನ್ಮಾನ ಸೇವಾವಹಿಯಲ್ಲಿ [Electronic Service Register (ESR) ] ಪೂರ್ಣಗೊಳಿಸಿ ಪ್ರಕಟಿಸಲು ಸೂಚಿಸಿದೆ. ತಪ್ಪಿದಲ್ಲಿ ಜಿಲ್ಲಾ ಉಪ ನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆ
ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ








