ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮರಿಟ್ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸಲು ಸೂಚಿಸಿದೆ.
ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಜ್ಞಾಪನಪತ್ರವನ್ನು ಹೊರಡಿಸಲಾಗಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಸಲ್ಲಿಸಿರುವ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ದಿನಾಂಕ:28.08.2024 ರೊಳಗಾಗಿ ಸಲ್ಲಿಸಲು ಉಲ್ಲೇಖ-(1) ರ ಈ ಕಛೇರಿಯ ಅಧಿಕೃತ ಜ್ಞಾಪನದಲ್ಲಿ ತಿಳಿಸಲಾಗಿತ್ತು. ತದನಂತರ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಉಲ್ಲೇಖ-(2) ರಂತೆ ದಿನಾಂಕ:03.09.2024 ರವರೆಗೆ ವಿಸ್ತರಿಸಿ, ದಾಖಲೆಗಳನ್ನು ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿತ್ತು. ಆದಾಗೂ ಈ ಅಧಿಕೃತ ಜ್ಞಾಪನದೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳು ಇದುವರೆವಿಗೂ ಅಪೇಕ್ಷಿತ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ ಎಂದಿದೆ.
ಆದ್ದರಿಂದ, ಈ ಅಧಿಕೃತ ಜ್ಞಾಪನದೊಂದಿಗೆ ಲಗತ್ತಿಸಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು (ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗಾಗಿ ವಡೆದಿಟ್ಟುಕೊಂಡಿರುವ ದೃಢೀಕೃತ ದಾಖಲೆಗಳು ದಿನಾಂಕ:15.11.2024 ರೊಳಗಾಗಿ ಈ ಕಛೇರಿಗೆ ಖುದ್ದು ಹಾಜರಾಗಿ ಸಲ್ಲಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ. ದಿನಾಂಕ:15.11.2024 ರ ನಂತರ ಸಲ್ಲಿಸುವ/ಸ್ವೀಕೃತವಾಗುವ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
ದಾಖಲೆಗಳನ್ನು ಸಲ್ಲಿಸಬೇಕಿರುವ ವಿಧಾನ:
1. ಕಾಲೇಜು ಶಿಕ್ಷಣ ಇಲಾಖೆಯ ವೆಬ್ ಸೈಟ್ ನ “Selection of Principals” ಪೇಜ್ ನಲ್ಲಿ ಲಭ್ಯವಿರುವ “Basic and Qualification Details for Selection for the Post of Principal” ಲಿಂಕ್ ಮೂಲಕ ಶೈಕ್ಷಣಿಕ ಅರ್ಹತೆಯ ಹಾಗೂ ಮೀಸಲಾತಿ ವಿವರಗಳನ್ನು ಆನ್-ಲೈನ್ ನಮೂನೆಯಲ್ಲಿ ಆಪ್ ಲೋಡ್ ಮಾಡುವುದು.
2. ಆಪ್ ಲೋಡ್ ಮಾಡಿದ ಆನ್-ಲೈನ್ ನಮೂನೆಯಲ್ಲಿನ ವಿವರಗಳನ್ನು ಪ್ರಿಂಟ್ ಮಾಡಿ, ಸಹಿ ಮಾಡಿದ ಪ್ರತಿಯನ್ನು ದಿನಾಂಕ:15.11.2024 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸುವುದು. ದಿನಾಂಕ:15.11.2024 ರ ನಂತರ ಸಲ್ಲಿಸಲಾಗುವ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
3. ಸಲ್ಲಿಸಬೇಕಿರುವ ದಾಖಲಾತಿಗಳು:
೩. ಆನ್-ಲೈನ್ ನಮೂನೆಯಲ್ಲಿ ತಿಳಿಸಿರುವ ಎಲ್ಲಾ ದಾಖಲಾತಿಗಳು
b. Annexure-1 ರಲ್ಲಿ ನಮೂದಿಸಿರುವ ಎಲ್ಲಾ Research Articles ಗಳ ದೃಢೀಕರಿಸಿದ ಪ್ರತಿಗಳು
C. Annexure-2 ರಲ್ಲಿರುವಂತೆ Research Score ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ದೃಢೀಕರಿಸಿದ್ದ ಪತಿಗಳು.
2002ರ ಬಳಿಕ ಆಸ್ಟ್ರೇಲಿಯಾ ವಿರುದ್ಧ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದ ಪಾಕಿಸ್ತಾನ | Pakistan hammer Australia