ಬೆಂಗಳೂರು: ರಾಜ್ಯದ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ಪರಿಷಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 11.04.2025ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದಿದೆ.
ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 16.04.2025ರ ಸಂಜೆ 5.30ರವರೆಗೆ ಸಂಬಂಧಿಸಿದಂತ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಸೀಟು ಹಂಚಿಕೆಯಾದವರು ಏ.16ರೊಳಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕು.
@CMofKarnataka @drmcsudhakar pic.twitter.com/arTMjKBNKV— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 12, 2025
ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: DKS ವ್ಯಂಗ್ಯ