ಬೆಂಗಳೂರು: ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 12 ರಂದು ಕೌನ್ಸಿಲಿಂಗ್ ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಜೂ.12 ರಂದು ಬೆಳಿಗ್ಗೆ 10.30 ಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶದ ಸೀಟ್‍ನ್ನು (ವಸತಿ ಶಾಲೆಯನ್ನು) ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಕೌನ್ಸಿಲಿಂಗ್ ಹಾಜರಾಗುವ ವಿದ್ಯಾರ್ಥಿಗಳು ತಪ್ಪದೇ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸಬೇಕು. 5 ಫೋಟೋ, ಹಾಲ್ ಟಿಕೆಟ್ (ಪ್ರವೇಶ ಪತ್ರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್, ವಿಶೇಷ ಕೋಟದಲ್ಲಿ ಆಯ್ಕೆಯಾದ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ದ್ವಿ ಪ್ರತಿಯಲ್ಲಿ ಝೆರಾಕ್ಸ್ ತರಬೇಕು.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ : ಸತತ 4 ಗಂಟೆಯ ಬಳಿಕ ಸ್ಥಳ ಮಹಜರು ನಡೆಸಿ ತೆರಳಿದ ‘SIT’

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ : ಸತತ 4 ಗಂಟೆಯ ಬಳಿಕ ಸ್ಥಳ ಮಹಜರು ನಡೆಸಿ ತೆರಳಿದ ‘SIT’

Share.
Exit mobile version