ಬೆಂಗಳೂರು: ಕೆ ಎಸ್ ಆರ್ ಟಿಸಿಯ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಈಗಾಗಲೇ ಕೆಲ ತರಬೇತಿ ಕೇಂದ್ರಗಳಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗಿದೆ. ಈಗ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಆಯ್ಕೆ ಮಾಡಿಕೊಂಡವರಿಗೆ ತರಬೇತಿ ಪರೀಕ್ಷೆಗೆ ದಿನಾಂಕ ನಿಗದಿ ಪಡಿಸಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 16-12-2024 ರಿಂದ ನಡೆಸಲಾಗುತ್ತಿದೆ. ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್. ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್‌ನಲ್ಲಿ ಪುಕಟಣೆ ನೀಡುವ ಮೂಲಕ ಮಾಹಿತಿ ನೀಡಲಾಗಿತ್ತು ಎಂದಿದೆ.
ಕೆಲವೊಂದು ಅಭ್ಯರ್ಥಿಗಳು ಗೈರುಹಾಜರಾಗಿರುವುದರಿಂದ ಅವರಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ ದಿನಾಂಕ: 08-05-2025 ರಿಂದ 20-05-2025 ರವರೆಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ಮರು ನಿಗದಿಗೊಳಿಸಲಾಗಿದೆ. ಗೈರುಹಾಜರಾದ ಅಭ್ಯರ್ಥಿಗಳು ಮತ್ತೊಮ್ಮೆ ನಿಗಮದ ಅಧಿಕೃತ ವೆಬ್-ಸೈಟ್‌ನಲ್ಲಿ ಆದ ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ. ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರದಲ್ಲಿ ಹಾಸನ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
ಭಾರತ-ಪಾಕ್ ನಡುವೆ ಉದ್ವಿಗ್ನತೆ: ಮೇ.7ರಂದು ಮಾಕ್ ಡ್ರಿಲ್ಸ್ ನಡೆಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
BREAKING: ಭಾರತ-ಪಾಕ್ ಉದ್ವಿಗ್ನತೆಯ ನಡುವೆ 2ನೇ ಬಾರಿಗೆ ಫತಾಹ್ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ!