ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆ ಎಸ್ ಆರ್ ಟಿ ಸಿ ನಿಗಮದಿಂದ ಕರೆಯಲಾಗಿದ್ದಂತ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಆಯ್ಕೆಗೊಂಡಿದ್ದಂತವರಿಗೆ, ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಈಗ ಈ ಮೂಲದಾಖಲಾತಿಗಳ ಪರಿಶೀಲನೆಗೆ ಹಾಜರಾಗದಿದ್ದಂತ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020 ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಯ ಮೂಲ ದಾಖಲಾತಿ / ದೇಹದಾರ್ಢ್ಯತೆ ಪರಿಶೀಲನೆಯನ್ನು ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ನಡೆಸಲಾಗುತ್ತಿದೆ ಎಂದಿದೆ.
ಸದರಿ ಮೂಲ ದಾಖಲಾತಿ ಪರಿಶೀಲನೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವುದು ಸೂಕ್ತವೆಂದು ನಿರ್ಧರಿಸಿ ದಿನಾಂಕ: 02-07-2024 ರಿಂದ ಅವಕಾಶ ನೀಡಿ ಈ ಕೆಳಗಿನಂತೆ ದಿನಾಂಕ ನಿಗಧಿಪಡಿಸಲಾಗಿದೆ ಎಂದು ತಿಳಿಸಿದೆ.
ದಿನಾಂಕ | ಅರ್ಜಿ ಸಂಖ್ಯೆ | |
ರಿಂದ | ವರೆಗೆ | |
02.07.2024 | D2000009 | D2004188 |
03.07.2024 | D2004194 | D2008643 |
04.07.2024 | D2008645 | D2013204 |
05.07.2024 | D2013207 | D2017706 |
06.07.2024 | D2017708 | D2021784 |
08.07.2024 | D2021786 | D2025935 |
09.07.2024 | D2025944 | D2029997 |
10.07.2024 | D2030003 | D2033674 |
11.07.2024 | D2033675 | D2044974 |
12.07.2024 | ಗೈರುಹಾಜರಿ ಹಾಗೂ ಉಳಿದ ಇತರೆ ಎಲ್ಲಾ ಅಭ್ಯರ್ಥಿಗಳು | |
13.07.2024 |
ಅದರಂತೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಎಸ್. ಎಂ.ಎಸ್ ಮೂಲಕ ಮಾಹಿತಿ ನೀಡಿದ್ದು, ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಿಂದ ಅಂತಿಮ ಕರೆಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಅಗತ್ಯ ಮೂಲ ದಾಖಲಾತಿಗಳೊಂದಿಗೆ ನಿಗಧಿತ ದಿನಾಂಕ ಅಥವಾ ದಿ:13-07-2024 ರೊಳಗಾಗಿ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ. ಇದು ಅಂತಿಮ ಅವಕಾಶವಾಗಿದ್ದು, ತದನಂತರ ಬಂದಲ್ಲಿ ಪರಿಗಣಿಸಲಾಗುವುದಿಲ್ಲ ಎಂಬುದಾಗಿ ತಿಳಿಸಿದೆ.
CBSE, ICSE ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕು: ಶಿಕ್ಷಣ ಇಲಾಖೆ ಆದೇಶ
BREAKING: ಸದನದಲ್ಲೇ ಕುಸಿದು ಬಿದ್ದ ಕಾಂಗ್ರೆಸ್ ಸಂಸದೆ ಪುಲೋ ದೇವಿ, ಆಸ್ಪತ್ರೆಗೆ ದಾಖಲು..!