ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹುಮ್ಮಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ರಿಂದ ಚಾಲನಾ ವೃತ್ತಿ DDOT:18-09-2024 ಇಚ್ಚಿಸಿರುವ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದೆ.
ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 13-09-2024 ರಂದು ಮಧ್ಯಾಹ್ನ 1.00 ಗಂಟೆಯಿಂದ ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಿದೆ.
ವಿಶೇಷ ಸೂಚನೆ
ಸದರಿ ನೇಮಕಾತಿಯನ್ನು ಅಭ್ಯರ್ಥಿಗಳು ಗಣಕೀಕೃತ ಚಾಲನಾ ಪಥದಲ್ಲಿ ಗಳಿಸಿದ ಅಂಕಗಳ ಮೆರಿಟ್ ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯುವುದರಿಂದ ಮಾನವ ಹಸ್ತಕ್ಷೇಪ ಇರುವುದಿಲ್ಲ. ಆದುದರಿಂದ ಅಭ್ಯರ್ಥಿಗಳು ಯಾವುದೇ ಶಿಫಾರಸ್ಸು/ ಮಧ್ಯವರ್ತಿಗಳ ಅಮಿಷಗಳಿಗೆ ಒಳಗಾಗಬಾರದೆಂದು ಈ ಮೂಲಕ ಸ್ಪಷ್ಟಪಡಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಬಳ್ಳಾರಿ: ಸೆ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!