ಬೆಂಗಳೂರು: ಕೆ ಎಸ್ ಆರ್ ಟಿಸಿಯಲ್ಲಿ ಖಾಲಿ ಇದ್ದಂತ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಈಗಾಗಲೇ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಯ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 16-12-2024 ರಿಂದ ನಡೆಸಲಾಗುತ್ತಿದೆ. ಸದರಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ: 08-05-2025 ರಿಂದ 20-05-2025 ರವೆರೆಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ.
ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 23-05-2025 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 22-05-2025 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸುವುದು ಎಂಬುದಾಗಿ ತಿಳಿಸಿದೆ.
ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 23-05-2025 ರೊಳಗೆ ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ. ಈ ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರ ಹಾಸನ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.