ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದಂತ ಕ್ರಮಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್‌ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.
ಉಲ್ಲೇಖ-5ರ ಸುತ್ತೋಲೆಯಲ್ಲಿ ದಿನಾಂಕ:28-10-2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ. ಅದರಂತೆ ತಂತ್ರಾಂಶದ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು.
ಮುಂದುವರೆದು ತಂತ್ರಾಂಶದ ಮೊದಲ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ, ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವ ಪ್ರಕ್ರಿಯೆ ಒಳಗೊಂಡಿದ್ದು, ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗದಿಪಡಿಸುವ ಪ್ರಕ್ರಿಯೆ ಇಲ್ಲದೇ ಇರುವುದರಿಂದ ಮೊದಲ ಹಂತದ ತಂತ್ರಾಂಶ ಬಿಡುಗಡೆಗೆ ಅನುಮತಿ ಕೋರಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರನ್ನು ಕೋರಲಾಗಿತ್ತು ಎಂದಿದ್ದಾರೆ.
ಸರ್ಕಾರದ ಜಂಟಿ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ ಇವರು ಪೂರ್ವ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಿರುತ್ತಾರೆ. ಈ ಹಿನ್ನಲೆಯಲ್ಲಿ ತಂತ್ರಾಂಶದ ಮೊದಲ ಹಂತವನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.
BIG NEWS: 6ನೇ ದಿನಕ್ಕೆ ಕಾಲಿಟ್ಟ ‘NHM ನೌಕರ’ರ ಪ್ರತಿಭಟನೆ: ಸೌಜನ್ಯಕ್ಕೂ ಬೇಡಿಕೆ ಆಲಿಸದ ‘ಸಚಿವ ದಿನೇಶ್ ಗುಂಡೂರಾವ್’
ಟ್ರಂಪ್ ಜೊತೆ ಮಾತಿನ ಚಕಮಕಿ:’ಜೆಲೆನ್ಸ್ಕಿ’ಗೆ ಯುರೋಪಿಯನ್ ಮಿತ್ರರಾಷ್ಟ್ರಗಳು, ಕೆನಡಾ ಬೆಂಬಲ | Trump-Zelensky