ಬೆಂಗಳೂರು: 6 ತಿಂಗಳಿಂದ ರೇಷನ್ ಪಡೆಯದ ರೇಷನ್ ಕಾರ್ಡ್‌ಗಳ ಅಮಾನತಿಗೆ ರಾಜ್ಯ ಆಹಾರ ಇಲಾಖೆ ಮುಂದಾಗಲಿದೆ ಎನ್ನಲಾಗಿದೆ.
ಆರು ತಿಂಗಳಿಂದ ಒಟ್ಟು 3.26 ಲಕ್ಷ ಕುಟುಂಬಗಳು ಪಡಿತರವನ್ನೇ ಪಡೆದಿಲ್ಲ. ಈ ಹಿನ್ನೆಲೆ ಪಡಿತರ ಪಡೆಯದ ರೇಷನ್ ಕಾರ್ಡ್ಗಳ ಡೇಟಾ ಸಂಗ್ರಹಿಸಿ ಅವುಗಳ ಅಮಾನತ್ತು ಮಾಡುವುದಕ್ಕೆ ಕೂಡ ಮುಂದಾಗಿದೆ ಎನ್ನಲಾಗಿದೆ. ಈ ಬಿಪಿಎಲ್, ಅಂತ್ಯೋದಯ ಹಾಗೂ ಪಿಎಚ್‌ಎಚ್ ಕಾರ್ಡ್‌ಗಳಿಂದ ರೇಷನ್ ಪಡೆಯದೇ ಆರು ತಿಂಗಳಾಗಿದ್ದರೆ ಅಂತಹ ರೇಷನ್ ಕಾರ್ಡ್‌ಗಳನ್ನು ಅಮಾನತು ಮಾಡಬಹುದು ಎನ್ನಲಾಗಿದೆ.
ಇನ್ನೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡ್‍ಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2 ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.ಇನ್ನೂ ರಾಷ್ಟ್ರೀಯ ಆಹಾರ ಸುರಕ್ಷತೆ ಕಾಯ್ದೆ (ಎನ್ಎಫ್ಎಸ್ಎ) ಹಾಗೂ ಸುಪ್ರೀಂ ಕೋರ್ಟ್ ಆದೇಶದನ್ವಯ ಪಡಿತರ ಕಾರ್ಡ್ನ ಪ್ರತಿಯೊಬ್ಬರು ಇಕೆವೈಸಿ ಮಾಡಿಸಿಕೊಳ್ಳಬೇಕೆಂಬ ನಿಯಮವಿದೆ. ಎಲ್ಲ ಕಾರ್ಡ್ದಾರರು ಇಕೆವೈಸಿ ಮಾಡಿಸಿಕೊಂಡರೆ ನಕಲಿ ಕಾರ್ಡ್ ಪತ್ತೆಯಾಗುವುದಲ್ಲದೆ ಪಡಿತರ ಸೋರಿಕೆ ತಡಗಟ್ಟಬಹುದು ಎನ್ನಲಾಗಿದೆ.