ಬೆಂಗಳೂರು: ರಾಜ್ಯದ ಪಿಯು ಕಾಲೇಜುಗಳಲ್ಲಿ ಪರೀಕ್ಷಾ ತಯಾರಿ ಹೆಸರಲ್ಲಿ ಯಾವುದೇ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆ ನೀಡುವಂತಿಲ್ಲ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಪಿಯು ಫಲಿತಾಂಶ ಸುಧಾರಣೆಗಾಗಿ ಕ್ರಮ ಕೈಗೊಂಡಿರುವ ಶಿಕ್ಷಣ ಇಲಾಖೆಯು, ಜೂನ್‌ನಿಂದ ಮಾರ್ಚ್ ಅಂತ್ಯದವರೆಗೆ ತರಗತಿ ನಡೆಸಲು ಈಗಾಗಲೇ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ. ಆದರೆ ಡಿಸೆಂಬರ್‌ಅಂತ್ಯದ ವೇಳೆಗೆ ಪಠ್ಯಕ್ರಮ ಬೋಧನೆ ಮುಕ್ತಾಯಗೊಳಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಗೆ ಕಾಲೇಜು ಹಂತ ದಲ್ಲೇ ರಜೆ ಘೋಷಿಸುವುದು ಅಥವಾ ತರಗತಿಗಳನ್ನು ನಡೆಸದಿರುವುದು ಹಿಂದಿನ ವರ್ಷಗಳಲ್ಲಿ ಕಂಡುಬಂದಿದೆ. ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿವೆ. ಹಾಗಾಗಿ ಫೆ.27ರವರೆಗೆ ತರಗತಿ ಪಾಠ ನಡೆಸಬೇಕೆಂದು ಸೂಚಿಸಿದೆ.
ಸ್ಟಡಿ ಮಾಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಕಾಲೇಜಿನಲ್ಲಿಯೇ ವಿದ್ಯಾರ್ಥಿಗಳನ್ನು ಮುಖ್ಯ ಪರೀಕ್ಷೆಗೆ ತಯಾರಿ ಮಾಡಬೇಕು ಈ ಹಿನ್ನೆಲೆ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.








