Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ PDO, ಕಾರ್ಯದರ್ಶಿ, ಬಿಲ್ ಕಲೆಕ್ಟರ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
KARNATAKA

ಇನ್ಮುಂದೆ PDO, ಕಾರ್ಯದರ್ಶಿ, ಬಿಲ್ ಕಲೆಕ್ಟರ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

By kannadanewsnow0907/03/2025 5:45 AM

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನಲ್ಲಿ ಕೌನ್ಸಿಲಿಂಗ್ ಮೂಲಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ವರ್ಗಾವಣೆ ಮಾಡೋದಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

2024-25 ನೇ ಸಾಲಿನ ಆಯವ್ಯಯದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25 ನೇ ಸಾಲಿನಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಘೋಷಿಸಲಾಗಿರುತ್ತದೆ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ದಿನಾಂಕ:25.06.2024 ರಂದು ಆದೇಶವನ್ನು ಹೊರಡಿಸಲಾಗಿದೆ. ಈ ಸಂಬಂಧ ತಂತ್ರಾಂಶ ಅಭಿವೃದ್ಧಿಪಡಿಸಿ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿ ಆರೋಹಿಸಲಾಗಿರುತ್ತದೆ.

ಉಲ್ಲೇಖ (2) ಮತ್ತು (3) ರನ್ವಯ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವಾ ವಿವರಗಳ ದತ್ತಾಂಶವನ್ನು ದಿನಾಂಕ: 14.08.2024 ಮತ್ತು 26.08.2024 ರ ಒಳಗೆ ಪರಿಶೀಲಿಸಿ ಅನುಮೋದನೆ ನೀಡಲು ತಿಳಿಸಲಾಗಿರುತ್ತದೆ. ಪುಸ್ತುತ 2025-26 ನೇ ಸಾಲಿನ ವರ್ಗಾವಣೆಯನ್ನು ಕೌನ್ಸಿಲಿಂಗ್‌ ಮುಖಾಂತರ ಮಾಡಬೇಕಾಗಿರುವುದರಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಇತ್ತೀಚಿನ ಸೇವಾ ವಿವರ ಅವಶ್ಯಕತೆ ಇರುವುದರಿಂದ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವಾ ವಿವರಗಳ ದತ್ತಾಂಶವನ್ನು ಕೆಳಕಂಡಂತೆ ನಿಗದಿಪಡಿಸಿರುವ ಅವಧಿಯೊಳಗೆ ಪರಿಶೀಲಿಸಿ, ಅನುಮೋದನೆ ನೀಡಲು ತಿಳಿಸಿದ್ದಾರೆ.

  • ಎಲ್ಲಾ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ರವರು https://rdprtransfer.karnataka.gov.in ವೆಬ್‌ಸೈಟ್‌ನಲ್ಲಿರುವ ದತ್ತಾಂಶ ಪರಿಶೀಲನೆ ಪೂರ್ಣಗೊಳಿಸಲು ಕೊನೆಯ ದಿನಾಂಕ 10-03-2025 ಆಗಿರುತ್ತದೆ.
  • ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಸದರಿ ವೆಬ್‌ಸೈಟ್‌ನಲ್ಲಿ ಇಂದೀಕರಿಸಲಾಗಿರುವ ತಮ್ಮ ಸೇವಾ ವಿವರವನ್ನು ಪರಿಶೀಲಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ 13-03-2025.
  • ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳು ಸ್ವೀಕರಿಸಲಾದ ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಳಿಸಲು ಕೊನೆಯ ದಿನಾಂಕ 15-03-2025 ಆಗಿರುತ್ತದೆ.
  • ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೆಬ್‌ಸೈಟ್‌ನಲ್ಲಿನ ದತ್ತಾಂಶವನ್ನು ಅನುಮೋದಿಸಿ, ಪೂರ್ಣಗೊಳಿಸಲು ಕೊನೆಯ ದಿನಾಂಕ 19-03-2025 ಆಗಿರುತ್ತದೆ.

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.