ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್ ಗಳ ಆಹಾರ ಸುರಕ್ಷತೆಗೆ ರಾಜ್ಯ ಸರ್ಕಾರವು ಮಹತ್ದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಆಹಾರ ಪರೀಕ್ಷಿಸಲು ರಾಜ್ಯ ಸರ್ಕಾರವೇ ಕಿಟ್ ಪೂರೈಕೆ ಮಾಡಲಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರೊಂದಿಗೆ ಸಭೆ ನಡೆಸಿದ್ದಾರೆ ಅತಿಹೆಚ್ಚು ಹೋಟೆಲ್, ರೆಸ್ಟೋರೆಂಟ್ ಇರುವ ಸ್ಥಳಗಳಲ್ಲಿ ಇಲಾಖೆಯಿಂದಲೇ ಆಹಾರ ಪರೀಕ್ಷೆ ಕಿಟ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಹಲವು ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಶುಚಿತ್ವವಿಲ್ಲದ ಹಾಗೂ ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿರುವ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರೂ ಆಹಾರ ಸುರಕ್ಷತೆ ಪರೀಕ್ಷೆ ಮಾಡಿಸಿಕೊಳ್ಳಲು ಅನುವಾಗುವಂತೆ ಆರೋಗ್ಯ ಇಲಾಖೆಯಿಂದ ಆಹಾರ ಪರೀಕ್ಷಾ ಕಿಟ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ