ಬೆಳಗಾವಿ : ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಬೇಕು ಎಂಬ ಬೇಡಿಕೆಯನ್ನಿಟ್ಟಿದ್ದಾರೆ. ಆದರೆ, ವಾಸ್ತವದಲ್ಲಿ ಅದನ್ನು ಪರಿಹರಿಸುವ ವಿಧಾನಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು,ಸಧ್ಯ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಬೇಕು ಎಂಬ ಬೇಡಿಕೆಯನ್ನಿಟ್ಟಿದ್ದಾರೆ. ಆದರೆ, ವಾಸ್ತವದಲ್ಲಿ ಅದನ್ನು ಪರಿಹರಿಸುವ ವಿಧಾನಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕಿದೆ ಎಂದರು.
ಆಶಾ ಕಾರ್ಯಕರ್ತೆಯರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿದರೂ, ಕೇಂದ್ರ ಸರ್ಕಾರ ಅವರ ಗೌರವಧನ ಹೆಚ್ಚಿಸದಿರುವುದು ಸಮಸ್ಯೆಯಾಗುತ್ತಿದೆ. ಇತ್ತೀಚಿಗೆ ₹1000 ಗೌರವಧನ ಹೆಚ್ಚಳ ಮಾಡಿರುವುದಾಗಿ ಹೇಳುತ್ತಾರಾದರೂ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಜೊತೆಗೆ ಸ್ಪಷ್ಟ ಆದೇಶವನ್ನು ಕೊಟ್ಟಿಲ್ಲ.
ಕಳೆದ ಬಜೆಟ್‌ನಲ್ಲಿ ನಮ್ಮ ರಾಜ್ಯದ ಪಾಲಿನ ಗೌರವಧನದ ₹40 ಕೋಟಿ ಹಣವನ್ನು ನಾವು ಹಾಗೆ ಇರಿಸಿಕೊಂಡಿದ್ದು, ಅದರಲ್ಲಿ ₹20 ಕೋಟಿ ಹಣವನ್ನು ಈ ವರ್ಷ ಬಿಡುಗಡೆ ಮಾಡುತ್ತೇವೆ. ಉಳಿದ ಹಣವನ್ನು ಕೇಂದ್ರ ಸರ್ಕಾರದ ಅನುದಾನ ಬಂದ ನಂತರ ಅದರ ಜೊತೆಗೆ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಲು ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಅನುದಾನ ಕೊಡುತ್ತಿದ್ದು, ಕೇಂದ್ರದ ಹಣ ಬಿಡುಗಡೆ ವಿಳಂಬವಾಗಿದೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ ಎಂಬುದನ್ನು ತಿಳಿಸಿದೆ.
ರಾಜ್ಯದಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಪ್ರದೇಶವಾರು ಅನುಗುಣವಾಗಿ ಗೌರವಧನ ಸಿಗುತ್ತಿದೆ. ಜನಸಂಖ್ಯೆ ಮತ್ತು ಕಾರ್ಯವ್ಯಾಪ್ತಿ ಪ್ರದೇಶಗಳ ವ್ಯತ್ಯಾಸದಿಂದ ಈ ಗೌರವಧನದಲ್ಲೂ ವ್ಯತ್ಯಾಸವಿದೆ.ಒಟ್ಟಾರೆಯಾಗಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದು ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.








