ಬೆಂಗಳೂರು : ಬೆಂಗಳೂರಿನಲ್ಲಿ ಡೆಂಘಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, 700 ಸ್ವಯಂ ಸೇವಕರು,240 ಆರೋಗ್ಯ ನಿರೀಕ್ಷಣಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಡೆಂಘಿ ತಡೆಗಟ್ಟುವ ಸಲುವಾಗಿ ಬೆಂಗಳೂರಿನಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ. ʼಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿʼ ಎಂಬ ಘೋಷವಾಕ್ಯದೊಂದಿಗೆ ಡೆಂಘಿ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.