Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪ್ರತಿಯೊಂದು ಮುಸ್ಲಿಂ ಧಾರ್ಮಿಕ ಸಂಸ್ಥೆಯೂ `ವಕ್ಫ್’ ಆಸ್ತಿಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BREAKING : ದಕ್ಷಿಣ ಆಫ್ರಿಕಾದಲ್ಲಿ ಭೀಕರ ಗುಂಡಿನ ದಾಳಿ: 12 ಮಂದಿ ಸಾವು, 9 ಜನರಿಗೆ ಗಂಭೀರ ಗಾಯ

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ಆನೆ-ಮಾನವ’ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಕ್ರಮ : ಸರ್ಕಾರದಿಂದ `ಆನೆಪಥ’ ಯೋಜನೆ ಜಾರಿ.!
KARNATAKA

ರಾಜ್ಯದಲ್ಲಿ `ಆನೆ-ಮಾನವ’ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಕ್ರಮ : ಸರ್ಕಾರದಿಂದ `ಆನೆಪಥ’ ಯೋಜನೆ ಜಾರಿ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್.ಸಿ.ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು.

ಪ್ರಸ್ತುತ ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆ”ಗಾಗಿ ಐದು ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.

ಸ್ಯಾಟಲೈಟ್ ಟೆಲಿಮೆಟ್ರಿ, ಕ್ಯಾಮೆರಾ ಟ್ರಾಪ್‌ ಗಳು ಮತ್ತು ಜಿ.ಐ.ಎಸ್. ಮಾದರಿಗಳನ್ನು ಬಳಸಿಕೊಂಡು ಆನೆ ಕಾರಿಡಾರ್‌ ಗಳನ್ನು ಗುರುತಿಸುವುದು ಮತ್ತು ಆನೆಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ಗುರುತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಆನೆ ಲದ್ದಿಯಲ್ಲಿರುವ ಹಾರ್ಮೋನ್ ಗಳ ಪರೀಕ್ಷೆ ನಡೆಸುವ ಮೂಲಕ ಆನೆಗಳ ದೇಹದ ಸ್ಥಿತಿ ಮತ್ತು ಒತ್ತಡ ಸೂಚಕಗಳನ್ನು ಅಂದಾಜು ಮಾಡಲಾಗುತ್ತದೆ. ಅದೇ ರೀತಿ ಬೆಳೆ ನಾಶದ ಮಾದರಿಗಳ ಅಧ್ಯಯನ, ಸಂಘರ್ಷದ ಹಾದಿ ತುಳಿದ ಆನೆಗಳ ಅಧ್ಯಯನ – ವಿಶ್ಲೇಷಣೆ ಮಾಡಿ ರೈತರಿಗೆ ಅರಿವು ಮೂಡಿಸುವುದೂ ಈ ಯೋಜನೆಯ ಭಾಗವಾಗಿದೆ ಎಂದು ತಿಳಿಸಿದರು.

ಆನೆಗಳು ನಾಡಿನತ್ತ ಬಂದಾಗ ಮುನ್ನೆಚ್ಚರಿಕೆಯ ಗಂಟೆ ಮೊಳಗಿಸುವ ವ್ಯವಸ್ಥೆ ರೂಪಿಸುವ ಹಾಗೂ ಸ್ವಯಂ ಚಾಲಿತ ಧ್ವನಿಯಂತ್ರಗಳ ಮೂಲಕ ಆನೆಗಳನ್ನು ಹಿಮ್ಮೆಟ್ಟಿಸುವ ಬಗ್ಗೆಯೂ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ ಮತ್ತು ಭಾರತೀಯ ವಿಜ್ಞಾನ ಮಂದಿರದ ತಜ್ಞರು, ಅಧ್ಯಯನಿಗಳು ಆನೆಗಳ ವರ್ತನೆ, ಸ್ವಭಾವದ ದತ್ತಾಂಶ ಕ್ರೋಡೀಕರಿಸಿ ಆನೆಪಥ (ಕಾರಿಡಾರ್) ಹಾಗೂ ಮುಂದಿನ 10 ವರ್ಷಗಳಲ್ಲಿ ಎದುರಾಗಬಹುದಾದ ಭವಿಷ್ಯದ ಸಂಘರ್ಷ ಪ್ರದೇಶ ಗುರುತಿಸಲೂ ಈ ಅಧ್ಯಯನ ನೆರವಾಗಲಿದೆ ಎಂದರು.

ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಅಧ್ಯಯನ:

ಮೈಸೂರು ಆನೆ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪ್ರಮುಖ ಅರಣ್ಯ ವಿಭಾಗಗಳು ಹಾಗೂ ಸಂರಕ್ಷಿತ ಪ್ರದೇಶಗಳು ಅಂದರೆ ಹುಲಿ ಸಂರಕ್ಷಿತ ಪ್ರದೇಶಗಳು, ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳು ಹಾಗೂ ಮಾನವ ವಾಸವಿರುವ ಕೃಷಿ ಪ್ರದೇಶಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಸಂಶೋಧನಾ ಚಟುವಟಿಕೆಗಳನ್ನು ಭಾರತೀಯ ವಿಜ್ಞಾನ ಮಂದಿರದ (IISc) ಪರಿಸರ ಶಾಸ್ತ್ರ ಕೇಂದ್ರ (Centre for Ecological Sciences) ಹಾಗೂ ಏಷಿಯನ್ ನೇಚರ್ ಕನ್ಸರ್ವೇಷನ್ ಫೌಂಡೇಶನ್, ಫೌಂಡೇಶನ್ ಫಾರ್ ಇಕಲಾಜಿಕಲ್ ರಿಸರ್ಚ್, ಅಡ್ವಕಸಿ ಅಂಡ್ ಲರ್ನಿಂಗ್, ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಹಯೋಗದಲ್ಲಿ ನಡೆಸಲುದ್ದೇಶಿಸಲಾಗಿದೆ ಎಂದು ವಿವರಿಸಿದರು.

ಸ್ಥಳಾಂತರಗೊಂಡ ಆನೆಗಳಿಗಾಗಿ ಮೃದು ಬಿಡುಗಡೆ ಶಿಷ್ಟಾಚಾರ, ಝ್ಯಾಪ್ ಕಾಲರ್‌ ಗಳು, ಬಜರ್‌ ಗಳು ಮತ್ತು ಸಮುದಾಯ ಬೆಂಬಲಿತ ಬೇಲಿಗಳಂತಹ ನವೀನ ಉಪಕರಣಗಳ ಅಭಿವೃದ್ಧಿಗೂ ಈ ಯೋಜನೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರೊ. ರಮನ್ ಸುಕುಮಾರ್ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ನಾವು ಕಾರಣಗಳನ್ನು ತಿಳಿಯುವುದು ಇಂದಿನ ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ಈ ಒಡಂಬಡಿಕೆ ಮಹತ್ವಪೂರ್ಣವಾದುದಾಗಿದೆ ಎಂದರು.

ಈ ಅಧ್ಯಯನದಿಂದ ಅಥವಾ ಯೋಜನೆಯ ಅನುಷ್ಠಾನದಿಂದ ಸಂಪೂರ್ಣವಾಗಿ ಮಾನವ-ಆನೆ ಸಂಘರ್ಷ ನಿರ್ಮೂಲನೆ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಪರಿಣಾಮಕಾರಿಯಾಗಿ ಸಂಘರ್ಷ ತಗ್ಗಿಸಬಹುದಾಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.

• ಯೋಜನೆಯ ಅವಧಿ: 2025–2029 (5 ವರ್ಷ)

• ಆರ್ಥಿಕ ವೆಚ್ಚ: ₹4.74 ಕೋಟಿ (ಕರ್ನಾಟಕ ಅರಣ್ಯ ಇಲಾಖೆಯ ನೆರವು)

• ಮೌಲ್ಯಮಾಪನ: ವರ್ಷಕ್ಕೆ ಎರಡು ಬಾರಿ ಪರಿಶೀಲನಾ ಸಭೆಗಳು, ವಾರ್ಷಿಕ ವರದಿಗಳು, ಮತ್ತು ಸಕಾಲಿಕ ದತ್ತಾಂಶದ ಡ್ಯಾಶ್‌ ಬೋರ್ಡ್ ನಿರ್ವಹಣೆ.

Important step to control 'elephant-human' conflict in the state: Government implements 'Elephant Path' project!
Share. Facebook Twitter LinkedIn WhatsApp Email

Related Posts

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

1 Min Read

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

2 Mins Read
Recent News

BIG NEWS : ಪ್ರತಿಯೊಂದು ಮುಸ್ಲಿಂ ಧಾರ್ಮಿಕ ಸಂಸ್ಥೆಯೂ `ವಕ್ಫ್’ ಆಸ್ತಿಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

BREAKING : ದಕ್ಷಿಣ ಆಫ್ರಿಕಾದಲ್ಲಿ ಭೀಕರ ಗುಂಡಿನ ದಾಳಿ: 12 ಮಂದಿ ಸಾವು, 9 ಜನರಿಗೆ ಗಂಭೀರ ಗಾಯ

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

ALERT : ಮನುಷ್ಯನ ನಡವಳಿಕೆಯನ್ನೇ ಬದಲಿಸಿದ `ಸ್ಮಾರ್ಟ್ ಫೋನ್’ :ಪ್ರತಿಯೊಬ್ಬರೂ ತಿಳಿಯಲೇಬೇಕಾದ ಸತ್ಯ!

State News
KARNATAKA

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಜೆಡಿಎಸ್ ಪಕ್ಷದ ಬೆಳವಣಿಗೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ನಾನು ಸುಮ್ಮನೆ ಕೂರಲ್ಲ. ನನ್ನ ಶಕ್ತಿ ಮೀರಿ…

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.