Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಹ್ಯಾಕಾಶದಿಂದ ಭಾರತಕ್ಕೆ ಐತಿಹಾಸಿಕ ‘ರೇಡಿಯೋ ಸಂಪರ್ಕ’ ಸಾಧಿಸಲು ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಸಜ್ಜು

30/06/2025 7:47 PM

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ: ಸೆನ್ ಠಾಣೆಗೆ ‘SP ರ್ಯಾಂಕ್ ಅಧಿಕಾರಿ’ಗಳ ನೇಮಕ
KARNATAKA

BIG NEWS: ರಾಜ್ಯದಲ್ಲಿ ‘ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ: ಸೆನ್ ಠಾಣೆಗೆ ‘SP ರ್ಯಾಂಕ್ ಅಧಿಕಾರಿ’ಗಳ ನೇಮಕ

By kannadanewsnow0907/10/2024 2:35 PM

ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು.

ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಯಾವುದೇ ಸೈಬರ್ ಅಪರಾಧವಾದರೆ ಹೊಸ ಕಾನೂನುಗಳನ್ವಯ ತನಿಖೆ ನಡೆಸಬೇಕಾಗುತ್ತದೆ ಎಂದರು.

ಪ್ರತಿ ಜಿಲ್ಲೆಗೊಂದರಂತೆ ರಾಜ್ಯದಲ್ಲಿ ಒಟ್ಟು 43 ಸೆನ್ ಪೊಲೀಸ್ ಠಾಣೆಗಳಿದ್ದು, ಸದ್ಯ ಡಿವೈಎಸ್ಪಿ ಅಧಿಕಾರಿಗಳು ಇರುತ್ತಾರೆ. ಮುಂದಿನ ದಿನಗಳಲ್ಲಿ ಎಸ್.ಪಿ ರ್ಯಾಂಕ್ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ತಿಳಿಸಿದರು.

ಸೆನ್ ಠಾಣೆಯ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ವಿಶೇಷ ರೀತಿಯ ತರಬೇತಿಗಳನ್ನು ರೂಪಿಸಲಾಗುವುದು. ಈ ಹಿನ್ನಲೆಯಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ರಾಜ್ಯದ ಪೊಲೀಸ್ ಇಲಾಖೆಗೆ ಹೆಚ್ಚು ಉಪಯೋಗವಾಗಲಿದೆ ಎಂದರು.

ದಿನೇ ದಿನೇ ಅಪರಾಧಗಳ ರೂಪರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ ನೀಡಲಾಗುವುದೆಂದು ಸಚಿವರು ತಿಳಿಸಿದರು.

ಸೈಬರ್ ಕ್ರೈಂಗಳಿಗೆ ಯಾವುದೇ ಅಡೆತಡೆ ಇಲ್ಲದೇ ವಿಶ್ವವ್ಯಾಪಿಯಾಗಿವೆ. ಗುಜರಾತನಲ್ಲಿ ಸೈಬರ್ ವಿಶ್ವ ವಿದ್ಯಾಲಯ ನಿರ್ಮಿಸಲಾಗಿದ್ದು ವಿವಿಧ ದೇಶಗಳಿಂದ ಬಂದು ತರಬೇತಿ ಪಡೆಯುತ್ತಿದ್ದಾರೆ. ಇದರ ಭಾಗವಾಗಿ ಧಾರವಾಡದಲ್ಲಿ ವಿಧಿ ವಿಜ್ಞಾನ ಸಂಸ್ಥೆ ಸ್ಥಾಪಿಸಲಾಗಿದ್ದು ರಾಜ್ಯದ ಪೊಲೀಸ್ ಇಲಾಖೆಗೆ ಆಧುನಿಕ ವಿಧಿ ವಿಜ್ಞಾನವು ಅತೀ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆಯೆಂದರು.

ಡ್ರಗ್ಸ ವಿರುದ್ಧ ಸಮರ

ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು.

ನಂತರ ವಿಧಿ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಈ ವಿದ್ಯಾರ್ಥಿಗಳಿಗೆ ಬರುವ ದಿನಮಾನಗಳಲ್ಲಿ ವಿಫುಲ ಅವಕಾಶಗಳಿವೆ ಸೈಬರ್ ಫಾರೆನ್ಸಿಕ್‍ಗಳು, ಸೈಬರ್ ಕಮಾಂಡೋಗಳು, ಸೈವರ್ ಎಕ್ಸಪರ್ಟಗಳು ತಯಾರಿ ಮಾಡುವಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ತಂತ್ರಜ್ಞಾನಕ್ಕನುಗುಣವಾಗಿ ಅಪರಾಧ ಹಾಗೂ ಅಪರಾಧಿಗಳ ಚಟುವಟಿಕೆಗಳನ್ನು ಮೊದಲೇ ವಿಶ್ಲೇಷಿಸಲು ಸರಿಯಾದ ಉಪಕರಣಗಳ ಜೊತೆ ಪರಿಣಿತರು ಸಹ ಇರಲೇಬೇಕು. ಭಾರತೀಯ 3 ಹೊಸ ಕಾನೂನುಗಳ ಬೇಡಿಕೆಗೆ ಅನುಗುಣವಾಗಿ ಪ್ರಕರಣಗಳನ್ನು ತನಿಖೆ ಮಾಡುವಲ್ಲಿ ಅನುಕೂಲವಾಗುತ್ತದೆ. ಸೈಬರ್ ಪರಿಣಿತರರು ನೀಡುವ ವರದಿ ಹಾಗೂ ದಾಖಲೆಗಳು ಹೊಸ ಕಾನೂನಿನಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಡಿಜಿಟಲ್ ವಿಧಿ ವಿಜ್ಞಾನ, ಜೌಷಧಿ ವಿಧಿ ವಿಜ್ಞಾನ, ಬಯೋಕೆಮಿಸ್ಟ್ರಿ ವಿಧಿ ವಿಜ್ಞಾನ, ಸೈಬರ್ ಸೆಕ್ಯೂರಿಟಿ ಹಾಗೂ ಪರಿಸರ ವಿಧಿ ವಿಜ್ಞಾನಗಳನ್ನು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಘಾಟೆ ತಿಳಿಸಿದರು.

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್

Share. Facebook Twitter LinkedIn WhatsApp Email

Related Posts

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM2 Mins Read

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM1 Min Read

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM3 Mins Read
Recent News

BREAKING : ಬಾಹ್ಯಾಕಾಶದಿಂದ ಭಾರತಕ್ಕೆ ಐತಿಹಾಸಿಕ ‘ರೇಡಿಯೋ ಸಂಪರ್ಕ’ ಸಾಧಿಸಲು ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಸಜ್ಜು

30/06/2025 7:47 PM

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM

ಭಾರತೀಯ ‘ರಾಗ’ಗಳನ್ನ ಕೇಳುವುದ್ರಿಂದ ಗಮನ, ಭಾವನಾತ್ಮಕ ಸಮತೋಲನ ಸುಧಾರಣೆ : ಅಧ್ಯಯನ

30/06/2025 7:26 PM
State News
KARNATAKA

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

By kannadanewsnow0930/06/2025 7:39 PM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶಗಳು ಜುಲೈ 1 ಕ್ಕೆ ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ…

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.