ಬೆಂಗಳೂರು : ರಾಜ್ಯದಲ್ಲಿ ಕುರಿಗಾಹಿಗಳ ವಿರುದ್ಧದ ದೌರ್ಜನ್ಯ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಕುರಿಗಾಹಿಗಳ ರಕ್ಷಣೆಗಾಗಿ ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ ವಿಧೇಯಕ ಮಂಡಿಸಲಾಗಿದೆ.
ರಾಜ್ಯದ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ ಹಿತರಕ್ಷಣೆಗಾಗಿ, ಅವರಿಗೆ ಭದ್ರತೆ ಒದಗಿಸುವ ಉದ್ದೇಶದೊಂದಿಗೆ ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ (ಕಲ್ಯಾಣ ಕ್ರಮಗಳು ಮತ್ತು ದೌರ್ಜ ನ್ಯಗಳ ವಿರುದ್ಧ ರಕ್ಷಣೆ) ವಿಧೇಯಕ 2025ನ್ನು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಮಂಡಿಸಿದರು.
ವಿಧೇಯಕದ ಅಡಿಯಲ್ಲಿ ಅಲೆಮಾರಿ ಕುರಿಗಾಹಿಗಳ ಪತ್ತೆ ಮತ್ತು ಅವರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಫಲಾನೂಭವಿಯಾಗಿ ನೊಂದಾಯಿಸಿಕೊಳ್ಳಬೇಕು. ಹೀಗೆ ನೋಂದಣಿ ಮಾಡಿಕೊಂಡವರು ಸರ್ಕಾರದಿಂದ ಗುರುತಿನ ಚೀಟಿ ನೀಡಲಾಗುವುದು. ಅದರ ಮೂಲಕ ವಸತಿ ಸೌಲಭ್ಯ, ವಿಮೆ, ಆರೋಗ್ಯ ಸೇವೆ ಹಲವು ಸೇವೆಗಳನ್ನು ಪಡೆಯಲು ಅರ್ಹರಾಗಲಿದ್ದಾರೆ.