Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಧನ ಬಿಕ್ಕಟ್ಟಿನ ನಡುವೆ ಭಾರತಕ್ಕೆ ನಿರಾಳ: ಮಂಗಳೂರು ತಲುಪಿದ ರಷ್ಯಾದ ‘ಆಕ್ವಾ ಟೈಟಾನ್’ ಮತ್ತು ಅಮೆರಿಕದ ‘ಪೈಕ್ಸಿಸ್ ಪಯೋನಿಯರ್’!

22/03/2026 12:41 PM

‘ಇದು ಹಣದುಬ್ಬರದ ಸ್ಪಷ್ಟ ಮುನ್ಸೂಚನೆ’: ರೂಪಾಯಿ ಮೌಲ್ಯ ಕುಸಿತ ಮತ್ತು ತೈಲ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆತಂಕ

22/03/2026 12:36 PM

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ: ಪವನ್ ಕುಮಾರ್ ಚಾಮ್ಲಿಂಗ್ ದಾಖಲೆ ಮುರಿದು ಅತಿ ಹೆಚ್ಚು ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ!

22/03/2026 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ
KARNATAKA

ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

By kannadanewsnow0903/12/2025 4:44 PM

ಬೆಂಗಳೂರು: ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಆ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ.

ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉಪಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನೆಲ್ಲಾ ನೀಡಲಾಗುತ್ತಿದೆ. ಗ್ರಾಮ ಪಂಚಾಯತಿಗಳಿಗೆ ಇದು ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡು ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಹಾಗೂ 199ಸಿ ಸೇರಿಸಲಾಗಿರುತ್ತದೆ. ತಿದ್ದುಪಡಿಯನ್ನು ದಿನಾಂಕ: 07.04.2025 ರಂದು ಅಧಿಸೂಚಿಸಲಾಗಿರುತ್ತದೆ.

ಅದರನ್ವಯ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು- 2025ನ್ನು‌ ರೂಪಿಸಲಾಗಿದೆ. ಈ ನಿಯಮಗಳು ದಿನಾಂಕ:17.10.2025ರಿಂದ ಜಾರಿಗೆ ಬಂದಿರುತ್ತವೆ. ನಿಯಮಗಳಲ್ಲಿ ಹೊಸ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಅನುಸರಿಸಬೇಕಾದ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳು ವಸೂಲಾತಿ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಲಾಗಿದೆ. ಜೊತೆಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಹೇಳಲಾಗಿದೆ. ಪ್ರತಿಯೊಂದು ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಅಧಿಕಾರಿಗಳ ಜವಾಬ್ದಾರಿಗಳು, ಜಾರಿಗೆ ಕಾಲಾವಧಿ, ಅಪೀಲುಹೀಗೆ ಪ್ರತಿಯೊಂದು ವಿಷಯದಲ್ಲಿಯೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವಿವರಿಸಲಾಗಿದೆ.

ನೂತನ ನಿಯಮಗಳ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿಯನ್ನು ನೀಡಲಾಗಿದೆ. ನಿಯಮಗಳ ಜಾರಿಗೆ ಪೂರಕವಾಗಿ ಪಂಚತಂತ್ರ ತಂತ್ರಾಂಶದಲ್ಲಿಯೂ ಅಗತ್ಯ ಮಾರ್ಪಾಡು ಮಾಡಲಾಗಿದೆ.

ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ–ಖಾತಾ ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸುವರ್ಣಾವಕಾಶ ಕಲ್ಪಿಸಿದೆ. ತಂತ್ರಾಂಶದ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರ ಆಸ್ತಿಗಳಿಗೆಡಿಜಿಟಲ್ ಇ-ಸ್ವತ್ತು ಪ್ರಮಾಣ ಪತ್ರ (ನಮೂನೆ- 11ಎ ಮತ್ತು ನಮೂನೆ 11ಬಿ) ವಿತರಣೆಯನ್ನು ಆರಂಭಿಸಲಾಗುತ್ತಿದೆ. ಆಸ್ತಿ ಸಂಬಂಧಿತ ಸೇವೆಗಳನ್ನು ಪಾರದರ್ಶಕವಾಗಿ ಹಾಗೂ ತ್ವರಿತವಾಗಿ ಒದಗಿಸಲು ಉದ್ದೇಶಿಸಲಾಗಿದೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಗೊಳ್ಳಲಿದ್ದು, ಸ್ಥಳೀಯ ಸರ್ಕಾರವಾದ ಗ್ರಾಮಪಂಚಾಯತಿಗಳ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ.

ಇ-ಸ್ವತ್ತು (eswathu.karnataka.gov.in) ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಹೊಸ ವ್ಯವಸ್ಥೆಯ ಆರಂಭಿಕ ದಿನಗಳಲ್ಲಿ, ಇ-ಸ್ವತ್ತು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಹಾಗೂ ಇ-ಸ್ವತ್ತು ಪ್ರಮಾಣಪತ್ರಗಳು (ನಮೂನೆ–11ಎ ಮತ್ತು ನಮೂನೆ–11ಬಿ) ಪಡೆಯುವಾಗ ಕೆಲವು ತಾಂತ್ರಿಕ ತೊಂದರೆಗಳು ಎದುರಾಗುವ ಸಾಧ್ಯತೆ ಇದೆ.

ತಂತ್ರಾಂಶದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಇಲಾಖೆ ಬದ್ದವಾಗಿದೆ. ನಾಗರಿಕರು ಸಹಕರಿಸುವಂತೆ ವಿನಂತಿಸಲಾಗಿದೆ. ಇ-ಸ್ವತ್ತು ತಂತ್ರಾಂಶದ ಮೂಲಕ ಇ-ಸ್ವತ್ತು ಪಡೆಯಲು ಎದುರಾಗುವ ಎಲ್ಲಾ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇಲಾಖೆಯಿಂದ ಇ-ಸ್ವತ್ತು ಸಹಾಯವಾಣಿ ಸಂಖ್ಯೆ: 9483476000 ಸ್ಥಾಪಿಸಲಾಗಿದೆ.

BREAKING ; ಸಂಚಾರ್ ಸಾಥಿ ಅಪ್ಲಿಕೇಶನ್ ‘ಪೂರ್ವ-ಸ್ಥಾಪನೆ’ ಕಡ್ಡಾಯ ಆದೇಶ ರದ್ದುಗೊಳಿಸಿದ ಕೇಂದ್ರ ಸರ್ಕಾರ

BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 12:09 PM1 Min Read

SHOCKING : ಸ್ವಿಮ್ಮಿಂಗ್ ಮಾಡುವಾಗಲೇ ಘೋರ ದುರಂತ : ಬೆಳಗಾವಿಲಿ ‘ಹೃದಯಾಘಾತದಿಂದ’ ಸೇನಾಧಿಕಾರಿ ಸಾವು!

22/03/2026 11:57 AM1 Min Read

BREAKING : ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 11:39 AM1 Min Read
Recent News

ಇಂಧನ ಬಿಕ್ಕಟ್ಟಿನ ನಡುವೆ ಭಾರತಕ್ಕೆ ನಿರಾಳ: ಮಂಗಳೂರು ತಲುಪಿದ ರಷ್ಯಾದ ‘ಆಕ್ವಾ ಟೈಟಾನ್’ ಮತ್ತು ಅಮೆರಿಕದ ‘ಪೈಕ್ಸಿಸ್ ಪಯೋನಿಯರ್’!

22/03/2026 12:41 PM

‘ಇದು ಹಣದುಬ್ಬರದ ಸ್ಪಷ್ಟ ಮುನ್ಸೂಚನೆ’: ರೂಪಾಯಿ ಮೌಲ್ಯ ಕುಸಿತ ಮತ್ತು ತೈಲ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆತಂಕ

22/03/2026 12:36 PM

ಇತಿಹಾಸ ಸೃಷ್ಟಿಸಿದ ನರೇಂದ್ರ ಮೋದಿ: ಪವನ್ ಕುಮಾರ್ ಚಾಮ್ಲಿಂಗ್ ದಾಖಲೆ ಮುರಿದು ಅತಿ ಹೆಚ್ಚು ಕಾಲ ಸರ್ಕಾರ ಮುನ್ನಡೆಸಿದ ಭಾರತದ ನಾಯಕ!

22/03/2026 12:18 PM

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 12:09 PM
State News
KARNATAKA

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

By kannadanewsnow0522/03/2026 12:09 PM KARNATAKA 1 Min Read

ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು,…

SHOCKING : ಸ್ವಿಮ್ಮಿಂಗ್ ಮಾಡುವಾಗಲೇ ಘೋರ ದುರಂತ : ಬೆಳಗಾವಿಲಿ ‘ಹೃದಯಾಘಾತದಿಂದ’ ಸೇನಾಧಿಕಾರಿ ಸಾವು!

22/03/2026 11:57 AM

BREAKING : ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್!

22/03/2026 11:39 AM

ಬೆಂಗಳೂರಲ್ಲಿ ಸಿಲಿಂಡರ್ ಕೊರತೆಯಿಂದ ಆಟೋಮೊಬೈಲ್ ಇಂಡಸ್ಟ್ರಿ ಬಂದ್ : ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಉದ್ಯೋಗಿಗಳು!

22/03/2026 11:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.