ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ವಶಪಡಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ.ಈ ಮಧ್ಯ ಬೆಂಗಳೂರಿನಲ್ಲಿ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು 2019ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದರು ಎಂದು ಆರೋಪಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ಪಕ್ಕದಲ್ಲಿ ಕೂರಿಸಿಕೊಂಡು ಪ್ರಚಾರ ಮಾಡಿದ್ದರು. ಕಡೂರಿನ ಎಪಿಎಂಸಿ ಮೈದಾನದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು.ಪ್ರಜ್ವಲ್ ಯುವಕ ಓಡಾಡ್ತಾರೆ ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು.
2019ರ ಏಪ್ರಿಲ್ 14ರಂದು ಪ್ರಜ್ವಲ್ ಹಾಡಿ ಹೊಗಳಿ ಟ್ವೀಟ್ ಮಾಡಿದ್ದರು. ಮೈತ್ರಿ ಕೈ ಬಲಪಡಿಸಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು ಎಂದು ಬೆಂಗಳೂರುನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.
ಮಹಿಳೆ ಕಿಡ್ನ್ಯಾಪ್ ಕೆಎಸ್ ನಲ್ಲಿ ಎಚ್ ಡಿ ರೇವಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಮಾಜಿ ಸಚಿವ ಎಚ್ ಡಿ ರೇವಣ್ಣ ರನ್ನು ಬಂಧಿಸಿದ್ದು ಸರಿಯಾಗಿದೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದು, ಪೊಲೀಸರ ಕಾರ್ಯಕ್ಕೆ ನಾನು ಸ್ಲಾಗಿಸುತ್ತೇನೆ ಬಂಧಿತ ಎಚ್ಡಿ ರೇವಣ್ಣ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.