ಬೆಂಗಳೂರು : ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಹೈಕೊರ್ಟ್ ಬಿಗ್ ರಿಲೀಫ್ ನೀಡಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣವನ್ನು ರದ್ದುಪಡಿಸಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ಕೃಷ್ಣ, ಎಸ್ ದೀಕ್ಷಿತ್ ಅವರ ನ್ಯಾಯಪೀಠ, ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣವನ್ನು ರದ್ದು ಮಾಡಿದೆ.