ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರ್ ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಈ ಎಫ್ಐಆರ್ ರದ್ದುಕೋರಿ, ಹೆಚ್ ಡಿಕೆ, ನಿಖಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿ, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ.
ರಾಜ್ಯದಲ್ಲಿ ‘ಶಾಲಾ ಮುಖ್ಯಸ್ಥ’ನಿಂದಲೇ ಕೀಚಕ ಕೃತ್ಯ: ‘ಪೋಕ್ಸೋ ಕೇಸ್’ ದಾಖಲು
ರೈತರ ಗಮನಕ್ಕೆ: ‘ಬೆಳೆ ಹಾನಿ’ ರೈತರ ಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ