ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ, ಹಿನ್ನಲೆ ಎನ್ನುವಂತೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಬದಲಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ನಕಾರ ವ್ಯಕ್ತ ಪಡಿಸಿದೆ.
ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂಬುದಾಗಿ ಹೆಸರು ಬದಲಾವಣೆಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೇ ರಾಮನಗರ ಜಿಲ್ಲೆಗೆ ಹೊಸ ಹೆಸರು ನಾಮಕರಣ ಮಾಡುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡೋದಾಗಿಯೂ ಘೋಷಣೆ ಮಾಡಿದ್ದರು. ಅದರಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಹೆಸರು ಮರು ನಾಮಕರಣ ಮಾಡಿ, ಕೇಂದ್ರಕ್ಕೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದಿಂದ ಕಳುಹಿಸಲಾಗಿತ್ತು. ಆದರೇ ಕೇಂದ್ರ ಸರ್ಕಾರ ಇದಕ್ಕೆ ನಕಾರ ವ್ಯಕ್ತ ಪಡಿಸಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂಬುದಾಗಿ ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದಂತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಹೀಗೆ ತಿರಸ್ಕರಿಸೋದಕ್ಕೆ ನಿಖರ ಕಾರಣ ಕೂಡ ಕೊಟ್ಟಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವೇ ಆದಂತೆ ಆಗಿದೆ.
BIG NEWS : ರಾಜ್ಯ ಸರ್ಕಾರದಿಂದ ಮಹತ್ವದ `ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕ’ 2025 ಮಂಡನೆ.!
BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಟಾಟಾ ಏಸ್-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು.!