ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆರಂಭಿಸಿದ್ದಂತ ಪೇ ಸಿಎಂ ಅಭಿಯಾನ ಮಹತ್ವದ ಸಂಚಲನವನ್ನೇ ಸೃಷ್ಠಿಸಿತ್ತು. ಆದ್ರೇ ಪೇ ಸಿಎಂ ಪೋಸ್ಟರ್ ಅಭಿಯಾನ ( PayCM Campaign ) ಸಂಬಂಧ ಕಾಂಗ್ರೆಸ್ ಮುಖಂಡರ ( Congress Leader ) ವಿರುದ್ಧ ಪ್ರಕರಣವನ್ನು ಸರ್ಕಾರ ದಾಖಲಿಸಿತ್ತು. ಇದೀಗ ಆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ರಾಜ್ಯ ಬಿಜೆಪಿ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ( CM Bommai ) ವಿರುದ್ಧ ಕಾಂಗ್ರೆಸ್ ಪಕ್ಷದಿಂದ ( Congress Party ) ಪೇ ಸಿಎಂ ಅಭಿಯಾನವನ್ನು ಆರಂಭಿಸಲಾಗಿತ್ತು. ಪೇ ಸಿಎಂ ಪೋಸ್ಟರ್ ಅಭಿಯಾನ ಸಂಬಂಧ ನೆಲಮಂಗಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ, ವಕೀಲ ಜೆಎಸ್ ನಾರಾಯಣ ಗೌಡ ಹಾಗೂ ಕಾಂಗ್ರೆಸ್ ಕಾನೂನು ಘಟಕದ ಮುಖ್ಯಸ್ಥ ವಕೀಲ ವಿ.ರಾಮಕೃಷ್ಣ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡಂ ಏಕಸದಸ್ಯಪೀಠವು, ಪೊಲೀಸರು ದಾಖಲಿಸಿದ್ದಂತ ಪ್ರಕರಣವನ್ನು ರದ್ದುಗೊಳಿಸಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಆಡಳಿತಾರೂಢ ಬಿಜೆಪಿಗೆ ತೀವ್ರ ಮುಜುಗರ ಉಂಟಾದಂತೆ ಆಗಿದೆ.