ಬೀದರ್: ಜಿಲ್ಲೆಯಲ್ಲಿ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೀದರ್ ನ ಎಸ್ ಕೆ ಡಾಬಾದಲ್ಲಿ ಊಟ ಮಾಡಲು ಕುಳಿತಿದ್ದಂತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯ ವೈಜಿನಾಥ ದತ್ತಾತ್ರೇಯ ಕೆಲಬಾ(49) ಎಂಬಾತನ ಮೇಲೆ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ್ದಾರೆ.
ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳೋದಕ್ಕೆ ಡಾಬಾದಿಂದ ಹೊರ ಬಂದರೂ ನಡು ರಸ್ತೆಯಲ್ಲೂ ಬಿಡದೇ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದಹಾಗೇ ಮೃತ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವೈಜಿನಾಥ್ ದತ್ತಾತ್ರೇಯ ಕೆಲಬಾ ಅವರು ಬೀದರ್ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ನಿವಾಸಿಯಾಗಿದ್ದಾರೆ.
BREAKING: 2025ರ ‘ಕರ್ನಾಟಕ SSLC ಪರೀಕ್ಷೆ-1’ರ ವಿಷಯವಾರು ‘ಕೀ ಉತ್ತರ’ ಪ್ರಕಟ | Karnataka SSLC Exam 2025