ಮಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಅನ್ಯಕೋಮಿನ ವಿದ್ಯಾರ್ಥಿನಿಗೆ ಮತ್ತೊಂದು ಕೋಮಿನ ಅಪ್ರಾಪ್ತ ವಿದ್ಯಾರ್ಥಿ ಚಾಕುವಿನಿಂದ ಕೈಗೆ ಇರಿದಿರುವುದಾಗಿ ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಹಿಂದೂ ವಿದ್ಯಾರ್ಥಿಯೊಬ್ಬ, ಮುಸ್ಲೀಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿರುವುದಾಗಿ ಹೇಳಲಾಗುತ್ತಿದೆ.
ಚಾಕು ಇರಿತಕ್ಕೆ ಒಳಗಾದಂತ ವಿದ್ಯಾರ್ಥಿನಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರು ವಿದ್ಯಾರ್ಥಿಗಳು ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನವರು. ಸಹಪಾಠಿಯೇ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ.
ಈ ಘಟನೆಯ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.
‘ರಾಜ್ಯ ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ: ʻಪಿಂಚಣಿʼಗೆ ಅರ್ಜಿ ಸಲ್ಲಿಸಲು ‘ಈ ದಾಖಲೆ’ಗಳು ಕಡ್ಡಾಯ
BREAKING : ದೇಶವು ಮತ್ತೊಂದು ಅತ್ಯಾಚಾರವನ್ನು ಕಾಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್