ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಹಿಳೆಯನ್ನು ಕರೆದುಕೊಂಡು ಬಂದಿದ್ದಂತ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವೆಸಗಿ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ.
ಇಲ್ಲಿಗೆ ಸುಮ್ಮನಾಗದಂತ ಕೀಚಕ, ಈ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ, ಬಳಿಕವೂ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದರಿಂದ ಬೇಸತ್ತಂತ ಮಹಿಳೆಯು, ಕದ್ರಿ ಠಾಣೆಗೆ ದೂರು ನೀಡಿದ್ದಳು.
ಈ ದೂರಿನ ಬೆನ್ನಲ್ಲೇ ಅಲರ್ಟ್ ಆದಂತ ಕದ್ರಿ ಠಾಣೆಯ ಪೊಲೀಸರು, ಕೇರಳ ಮೂಲದ ಆರೋಪಿ ಸಜಿತ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿ ಸಜಿತ್ ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.
BREAKING: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆ.ಆರ್ ರಾಜ್ ಕುಮಾರ್ ನೇಮಕ
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ