ಕಲಬುರ್ಗಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ ಯುವಕನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನರೋಣದಲ್ಲಿ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ನರೋಣ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ 26 ವರ್,ದ ಚನ್ನವೀರ ಹೀರಾ ಎಂಬಾತನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.