ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತ ಘಟನೆ ಎನ್ನುವಂತೆ ತೋಟದ ಮನೆಯಲ್ಲಿದ್ದಂತ ದಂಪತಿಗಳನ್ನು ಒಳಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕಗ್ಗೊಲೆ ಮಾಡಿರುವಂತ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಡಪನಳ್ಳಿಯಲ್ಲಿ ತೋಟದ ಮನೆಯಲ್ಲಿ ರಂಗಸ್ವಾಮಿ ಗೌಡ(65) ಹಾಗೂ ಶಾಂತಮ್ಮ ಎಂಬುವರು ವಾಸವಾಗಿದ್ದರು. ಅವರನ್ನು ಒಳಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ದುಷ್ಕರ್ಮಿಗಳ ಈ ಕಗ್ಗೊಲೆಯಿಂದಾಗಿ ಮೈಸೂರು ಜಿಲ್ಲೆಯ ತೋಟದ ಮನೆಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಿಳಿಕೆರೆ ಠಆಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದಾರೆ. ದಂಪತಿಗಳ ಕೊಲೆಯ ಹಿಂದಿನ ಕಾರಣ ತನಿಖೆಯ ನಂತ್ರವೇ ತಿಳಿಯಬೇಕಿದೆ.
ನಾಳೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಪ್ರತಿಭಟನೆ
ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚದಿರಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ