ದಾವಣಗೆರೆ: ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಇಂತಹ ಘಟನೆ ನಡೆದಿದೆ. ಪತ್ನಿಗೆ ಚಾಕುವಿನಿಂದ ಇರಿದ ಬಳಿಕ ತಾನೂ ಕೈಗೆ ಇರಿದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪತ್ನಿ ಪವಿತ್ರಾ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ ಪತಿ ಪ್ರವೀಣ್, ಪತ್ನಿ ಪವಿತ್ರಾರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ದಾವಣಗೆರೆಯ ಜಾಲಿನಗರದ ನಿವಾಸಿ ಪ್ರವೀಣ್ ಆಗಿದ್ದಾರೆ. ಬೆಂಗಳೂರು ಮೂಲದ ಪವಿತ್ರಾ ಜೊತೆ ಮದುವೆಯಾಗಿದ್ದರು. ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹವನ್ನು ಪ್ರವೀಣ್ ಹಾಗೂ ಪವಿತ್ರಾ ಆಗಿದ್ದರು. ಆದರೇ ಪತ್ನಿಯ ಶೀಲ ಶಂಕಿಸಿದ್ದ ಕಾರಣ ಕೆಲ ದಿನಗಳ ಹಿಂದೆ ಪತಿ ಪ್ರವೀಣ್ ತೊರೆದು ಪತ್ನಿ ಪವಿತ್ರಾ ಹೋಗಿದ್ದರು. ಇಂದು ನ್ಯಾಯಾಲಯದಲ್ಲಿ ವಿಚಾರಣೆ ಇರುವ ಕಾರಣ ಕೋರ್ಟ್ ಗೆ ಆಗಮಿಸಿದ್ದರು.
ನಿಗದಿತ ಕಾಲಮಿತಿಯಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ