ಬೆಳಗಾವಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸು ಘಟನೆ ಎನ್ನುವಂತೆ ಕಿಡಿಗೇಡಿಗಳು ಗ್ರಾಮ ಪಂಚಾಯ್ತಿ ಕಟ್ಟಡ ಮೇಲೆಯೇ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿರುವಂತ ಘಟನೆ ನಡೆದಿದೆ.
ಬೆಳಗಾವಿ ತಾಲ್ಲೂಕಿನ ಕಲಕಾಂಬ ಗ್ರಾಮ ಪಂಚಾಯ್ತಿ ಕಟ್ಟಡ ಮೇಲೆ ನಿನ್ನೆ ತಡರಾತ್ರಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಾಟೆಯಾಗಿದೆ. ಇದು ವಿಕೋಪಕ್ಕೆ ತಿರುಗಿದಾಗ, ತಡರಾತ್ರಿ ಕಿಡಿಗೇಡಿಗಳಿಂದ ಗ್ರಾಮ ಪಂಚಾಯ್ತಿ ಕಟ್ಟಕ್ಕೆ ಬೆಂಕಿ ಹಚ್ಚಿರುವುದಾಗಿ ಹೇಳಲಾಗುತ್ತಿದೆ.
ಕಲಕಾಂಬ ಗ್ರಾಮ ಪಂಚಾಯ್ತಿ ಬಳಿಗೆ ತಡರಾತ್ರಿ ಆಗಮಿಸಿದಂತ ಕಿಡಿಗೇಡಿಗಳು ಬಿಯರ್ ಬಾಟಲಿಯಲ್ಲಿ ಪೆಟ್ರೋಲ್ ಸುರಿದು, ಬಟ್ಟೆ ಹಾಕಿ, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ಕೃತ್ಯದ ಬಳಿಕ ಗ್ರಾಮ ಪಂಚಾಯ್ತಿ ಕಟ್ಟಡದಲ್ಲಿನ ಸಿಸಿಟಿವಿಯನ್ನು ಕೂಡ ಸಿಕ್ಕಿ ಬೀಳುವ ಭಯದಿಂದ ತೆಗೆದುಕೊಂಡು ಹೋಗಿದ್ದಾರೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರ ಬಂದೋಬಸ್ತ್ ಕೈಗೊಳ್ಳಲಾಗಿದೆ.
‘ನೀರಜ್ ಚೋಪ್ರಾ’ಗೆ ‘ಜಾವೆಲಿನ್ ಲೆಜೆಂಡ್ ಜಾನ್ ಜೆಲೆಜ್ನ’ ತರಬೇತಿ | Neeraj Chopra