ಮಂಡ್ಯ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಹಳೆಯ ವಿದ್ಯಾರ್ಥಿಗಳು ನಡೆಸಿರೋದು ಬೆಳೆಕಿಗೆ ಬಂದಿದೆ.
ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿ ಬೀಳಿಸೋ ಪ್ರಕರಣವೊಂದು ಬೆಳಕಿಗೆ ಬಂದಿದೆ. ಚಿತ್ರಕಲೆ, ಕ್ರೀಡೆ ಹೇಳಿಕೊಡೊ ನೆಪದಲ್ಲಿ ಮಕ್ಕಳನ್ನೇ ಬಳಸಿಕೊಂಡು ಹೀನ ಕೃತ್ಯವನ್ನು ಹಳೇ ವಿದ್ಯಾರ್ಥಿಗಳು ನಡೆಸಿದ್ದಾರೆ.
ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನೀಯರ ನಗ್ನ ಚಿತ್ರ ಪೋಟೊ ತೆಗೆದು ಬ್ಲಾಕ್ ಮೇಲ್ ಮಾಡಲಾಗಿದೆ. ಇದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ ಬಳಸಿಕೊಂಡ ಕಿರಾತಕನ ಕತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ ಬೆಚ್ಚಿ ಬೀಳಿಸೊ ಪ್ರಕರಣ ಬೆಳಕಿಗೆ ಬಂದಿದೆ.
ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆಯೊಂದರ ಹಲವು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನೊಂದ ನಾಲ್ವರು ಬಾಲಕಿಯರು ನೀಡಿರೊ ದೂರಿನನ್ವಯ ಯೋಗಿ ಎಂಬಾತನ ವಿರುದ್ದ ಎಫ್ ಐ ಆರ್ ದಾಖಲಿಸಿ, ಜೈಲಿಗೆ ಪೊಲೀಸರು ಕೃಷ್ಣನ ಜನ್ಮಸ್ಥಳಕ್ಕೆ ಕಳಿಸಿದ್ದಾರೆ.
ಅಂದಹಾಗೇ ಕೀಚಕ ಕೃತ್ಯ ಮೆರೆದಂತ ಯೋಗಿ ಎಂಬಾತ ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕೀಯರನ್ನು ಟಾರ್ಗೆಟ್ ಮಾಡುತ್ತಿದ್ದನಂತೆ. ಡ್ರಾಪ್ ಕೊಡೊ ನೆಪದಲ್ಲಿ, ಕ್ರೀಡೆ ಹೇಳಿಕೊಡೊ ನೆಪದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದಾಗಿ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಇನ್ನೂ ವಿದ್ಯಾರ್ಥಿನೀಯರು ಬಟ್ಟೆ ಬದಲಿಸುವಾಗ ನಗ್ನ ಪೋಟೊ ತೆಗೆದು ಅವುಗಳನ್ನ ಹೆತ್ತವರಿಗೆ ಕಳುಹಿಸೊದಾಗಿ ಬೆದರಿಸಿ ದೌರ್ಜನ್ಯ ನಡೆಸಿದ್ದಾನಂತೆ. ಕಿರಾತನಕ ದೌರ್ಜನ್ಯದಿಂದ ಬೇಸತ್ತ ಮಕ್ಕಳಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
ವಿದ್ಯಾರ್ಥಿನೀಯರ ಪತ್ರ ನೋಡಿ ಶಾಲೆಗೆ ತೆರಳಿ ವಿಚಾರಿದಾಗ ಘೋರ ಕೃತ್ಯ ಬೆಳಕಿಗೆ ಬಂದಿದೆ. ಒಂದೇ ಶಾಲೆಯ ಹಲವು ವಿದ್ಯಾರ್ಥಿನೀಯರಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿರೊ ಆಸಾಮಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ನೀಡಿರೊ ದೂರಿನನ್ವಯ ಆತನ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಪೋಸ್ಕೊ ಜೊತೆಗೆ ಐಪಿಸಿ ಸೆಕ್ಸನ್ 354 A, 354 D, 509 ರಿತ್ಯ ಕೇಸ್ ದಾಖಲಿಸಿ ಜೈಲಿಗೆ ಪೊಲೀಸರು ಕಳುಹಿಸಿದ್ದಾರೆ. ಈ ಸಂಬಂಧ ಮೇಲುಕೋಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
‘ವಕ್ಫ್ ಆಸ್ತಿ ಒತ್ತುವರಿ’ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಖಡಕ್ ಸೂಚನೆ
BIG NEWS : ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ ಸಿದ್ದರಾಮಯ್ಯ ಆದೇಶ