ಶಿವಮೊಗ್ಗ: ಇಂದು ನಾಗರ ಪಂಚಮಿ. ರಾಜ್ಯಾಧ್ಯಂತ ಸಡಗರ, ಸಂಭ್ರಮದಿಂದ ಹುತ್ತಕ್ಕೆ ಹಾಲೆರೆದು ಪೂಜಿಸಲಾಗಿದೆ. ಇಂತಹ ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ಸಾಗರ ತಾಲ್ಲೂಕಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಾಗರ ಪಂಚಮಿಯ ಇಂದಿನ ದಿನದಂದೇ ಬಾಣಂತಿಯಾಗಿದ್ದಂತ ರಂಜಿತಾ(22) ಎಂಬುವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ರಂಜಿತಾ ಅವರು ಹುತ್ತಾದಿಂಬ ಗ್ರಾಮದಲ್ಲಿ ಜಾನು+ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ರಂಜಿತಾ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಅಂದಹಾಗೇ ರಂಜಿತಾ ಅವರು ಮೂರು ತಿಂಗಳ ಹಿಂದಷ್ಟೇ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಇಂದು ಹಾವು ಕಚ್ಚಿ ಸಾವನ್ನಪ್ಪಿದ್ದರಿಂದ ಇಬ್ಬರು ಮಕ್ಕಳು ತಾಯಿಯನ್ನು ಕಳೆದುಕೊಂಡಂತೆ ಆಗಿದೆ.