ಬೆಂಗಳೂರು: ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಏರಿಕೆ ಮಾಡಲಾಗಿದೆ.
ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದಲ್ಲಿ ನಂದಿನಿ ಹಾಲಿನದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡುವುದಕ್ಕೆ ಅನುಮೋದಿಸಿದೆ.
ಕೆಲ ದಿನಗಳ ಹಿಂದೆ ಕೆಎಂಎಫ್ ಅಧ್ಯಕ್ಷರು, ಹಾಲಿನ ಒಕ್ಕೂಟದೊಂದಿಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಈ ಸಭೆಯಲ್ಲಿ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಳಿಕ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.