ಬೆಳಗಾವಿ: ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ.
BIGG NEWS: ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ಧತೆ; ಎಂಜಾಯ್ ಮಾಡಲು ಕಳ್ಳದಾರಿ ಹಿಡಿದ ಅಪ್ರಾಪ್ತರು
ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸಲಿದ್ದಾರೆ. ಆಧಿವೇಶನದಲ್ಲಿ ಮಹತ್ವ ವಿಷಯದ ಕುರಿತು ಚರ್ಚೆ ಮಾಡಲಾಗಿದೆ.