ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿ ಬಿಗ್ ರಿಲೀಫ್ ನೀಡಿದೆ.

ಶಾಸಕ ಉದಯ್ ಗರುಡಾಚಾರ್ ಅವರು ಚುನಾವಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ವಸೂಲಿ ಮಾಡಿದ್ದಂತ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸುವಂತೆಯೂ ಹೈಕೋರ್ಟ್ ಆದೇಶಿಸಿದೆ.

ಅಂದಹಾಗೇ ಶಾಸಕ ಉದಯ್ ಗರುಡಾಚಾರ್ ವಿರುದ್ಧ ವಿಚಾರಣಾ ನ್ಯಾಯಾಲಯವು 2 ತಿಂಗಳ ಶಿಕ್ಷೆಯನ್ನು ವಿಧಿಸಿತ್ತು.

“ಅಮೆರಿಕಕ್ಕೆ ಮೋದಿಯಂತಹ ನಾಯಕನ ಅಗತ್ಯವಿದೆ” : ‘ನಮೋ’ ಶ್ಲಾಘಿಸಿದ ‘ಜೆಪಿ ಮೋರ್ಗಾನ್ CEO’

WhatsApp Updates:ಶೀಘ್ರದಲ್ಲೇ ವಾಟ್ಸಪ್ ನಲ್ಲಿ ಮೊಬೈಲ್ ಸಂಖ್ಯೆಯನ್ನು ಉಳಿಸದೆ ಕರೆ ಮಾಡುವ ಸೌಲಭ್ಯ

Share.
Exit mobile version