ಬೆಂಗಳೂರು: ಬೇಲೆಕೇರಿ ಬಂದರನಿಂದ ಅಕ್ರಮವಾಗಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ್ದಂತ ಶಿಕ್ಷೆಯ ಪ್ರಮಾಣವನ್ನು ಹೈಕೋರ್ಟ್ ಅಮಾನತ್ತಿನಲ್ಲಿಡಲು ಆದೇಶಿಸಿದೆ.
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಣಿಕೆ ಪ್ರಕರಣ ಸಂಬಂಧ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.
ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಿಕ್ಷೆಯ ಪ್ರಮಾಣವನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಅಲ್ಲದೇ 6 ವಾರಗಳಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡೋದಕ್ಕೆ ಸೂಚಿಸಿದೆ.
ಹೈಕೋರ್ಟ್ ನ ಈ ಆದೇಶಸಿಂದ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಲ್ಲದೇ ಜೈಲುಪಾಲಾಗಿರುವಂತ ಆರೋಪಿಗಳು ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ಈ ಹಂತ ಅನುಸರಿಸಿ, ‘ಇ-ಖಾತಾ’ ಪಡೆಯಲು ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಿ | E-Khata
BREAKING : ಮರಕುಂಬಿ ದಲಿತ ದೌರ್ಜನ್ಯ ಕೇಸ್: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು!