ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್ ಮ್ಯೂಸಿಯಂ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್ ಮ್ಯೂಸಿಯಂ ಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಾಜ್‌ಕುಮಾರ್ ನಮ್ಮವರು, ಅವರ ಬಗ್ಗೆ ನಮಗೆ ಬಹಳ ಅಭಿಮಾನವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ವರನಟ ಡಾ. ರಾಜ್‌ಕುಮಾರ್ ಮ್ಯೂಸಿಯಂ ಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ರಾಜ್‌ಕುಮಾರ್ ನಮ್ಮವರು, ಅವರ ಬಗ್ಗೆ ನಮಗೆ ಬಹಳ ಅಭಿಮಾನವಿದೆ ಎಂದು ಮುಖ್ಯಮಂತ್ರಿ @siddaramaiah ಅವರು ತಿಳಿಸಿದ್ದಾರೆ.#DrRajkumarMuseum pic.twitter.com/puoHQKUyn4
— DIPR Karnataka (@KarnatakaVarthe) April 25, 2025
ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.
ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.
ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಪಹಲ್ಗಾಮ್ ಉಗ್ರರ ದಾಳಿ: ಮೃತರ ಕುಟುಂಬದವರಿಗೆ ತಲಾ 4 ಲಕ್ಷ ಪರಿಹಾರ ಘೋಷಿಸಿದ NSE | Pahalgam Terror Attack