ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ ಆದರೂ ಕೂಡ ಕೆಲವು ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್ ಶೀಘ್ರದಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದು, ಇದೀಗ ದಾವಣಗೆರೆಯಲ್ಲಿ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಜೈ ಘೋಷ ಹಾಕಿರುವ ಘಟನೆ ನಡೆದಿದೆ.
ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರ ಸದ್ಯಕ್ಕೆ ನಿಲ್ಲದಂತೆ ಕಾಣುತ್ತಿಲ್ಲ. ಏಕೆಂದರೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಇದೀಗ ಪೂಜೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆದಿದ್ದು ನಗರ ದೇವತೆಯ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 101 ತೆಂಗಿನ ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಆದಷ್ಟು ಬೇಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಜೈಕಾರ ಹಾಕಿದ್ದಾರೆ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.