ನವದೆಹಲಿ: ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್ಕೇಸ್ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಪೊಲೀಸರ ನಿಯಂತ್ರಣ ಕೊಠಡಿಗೆ ಸೂಟ್ಕೇಸ್ ಪತ್ತೆಯಾದ ಬಗ್ಗೆ ಕರೆ ಬಂದಿದ್ದು, ಅದರಿಂದ ದುರ್ವಾಸನೆ ಹೊರಹೊಮ್ಮುತ್ತಿದೆ ಎಂದು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೇ ದೆಹಲಿ ಪೊಲೀಸರ ತಂಡವು ಸ್ಥಳಕ್ಕೆ ತಲುಪಿ ಸ್ಥಳೀಯ ಡೈವರ್ಗಳ ಸಹಾಯದಿಂದ ಅದನ್ನು ಚರಂಡಿಯಿಂದ ಹೊರತೆಗೆದಿದ್ದಾರೆ. ಸೂಟ್ಕೇಸ್ ಅನ್ನು ಓಪನ್ ಮಾಡಿ ನೋಡಿದಾಗ ಅದರೊಳಗೆ ಮಹಿಳೆಯ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮಹಿಳೆಯ ವಯಸ್ಸು ಸುಮಾರು 28-30 ವರ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.