ವಿಜಯನಗರ: ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್ ನಾಯಕರು ಅದನ್ನು ವಿರೋಧಿಸಿದ್ದರು. ಲವ್ ಜಿಹಾದ್‌ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ ಎಂಬುದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಇಂದು ತುಂಗಭದ್ರಾ ಜಲಾಶಯ ವೀಕ್ಷಣೆ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್ ನಾಯಕರು ಅದನ್ನು ವಿರೋಧಿಸಿದ್ದರು. ಲವ್ ಜಿಹಾದ್‌ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ. ಅನನ್ಯ ಭಟ್ ಇರುವುದೇ ಸುಳ್ಳು ಎಂದು ತಿಳಿದುಬಂದಿದೆ. ಆ ವ್ಯಕ್ತಿಗೆ ಮಾಸ್ಕ್ ಹಾಕಿಸಿದ್ದೇ ಸಿಎಂ ಸಿದ್ದರಾಮಯ್ಯನವರ ಸರ್ಕಾರ. ಪ್ರಗತಿಪರರು ಸಿದ್ದರಾಮಯ್ಯನವರ ಕಚೇರಿಗೆ ಹೋಗಿ ನೂರಾರು ಕೊಲೆಯಾಗಿದೆ ಎಂದು ಹೇಳಿದ್ದರು. ಇಂತಹವರ ಮಾತು ಕೇಳಿ ಸಿಎಂ ಸಿದ್ದರಾಮಯ್ಯ 2-3 ಕೋಟಿ ರೂ. ಖರ್ಚು ಮಾಡಿದ್ದಾರೆ. ಯಾವನೋ ದಾರಿಹೋಕ ಬಂದು ಎಸ್‌ಐಟಿಗೆ ಆಗ್ರಹ ಮಾಡಿದರೆ, ಅದಕ್ಕಾಗಿ ಎಸ್‌ಐಟಿ ರಚಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಇಷ್ಟೆಲ್ಲ ಮಾಡಲಾಗಿದೆ ಎಂದು ದೂರಿದರು.
ಮಸೀದಿ, ಚರ್ಚ್ ವಿಷಯಕ್ಕೆ ಈ ಹೋರಾಟಗಾರರು ಹೋಗಲ್ಲ. ಹಿಂದೂ ದೇವಸ್ಥಾನಗಳ ಬಗ್ಗೆ ಈ ರೀತಿ ಟೀಕೆ ಮಾಡುತ್ತಾರೆ. ಬುರುಡೆ ತಂದ ವ್ಯಕ್ತಿಯ ಪೂರ್ವಾಪರವನ್ನು ಮೊದಲೇ ವಿಚಾರಿಸಬೇಕಿತ್ತು. ಏಕಾಏಕಿ ಆತ ಮಾಸ್ಕ್ ಹಾಕಿ ಗುರುತು ಮರೆಮಾಚಲಾಗಿದೆ. ಮಾಸ್ಕ್ ಹಾಕದೇ ಇದ್ದಿದ್ದರೆ ಆತನ ಊರಿನವರು ಅವನೆಂತಹ ಕಳ್ಳ ಎಂದು ವಿವರಿಸುತ್ತಿದ್ದರು. ಕಾಂಗ್ರೆಸ್ ಸರ್ಕಾರಕ್ಕೆ ಕಾಮನ್‌ಸೆನ್ಸ್ ಇಲ್ಲ ಎಂದರು.
ಭಾರತದ ಭಾಗವನ್ನು ಪಾಕಿಸ್ತಾನ ಮಾಡಿದ್ದು ಇದೇ ಕಾಂಗ್ರೆಸ್‌ನವರು. ಆರ್‌ಎಸ್‌ಎಸ್ ಇರುವುದರಿಂದಲೇ ಭಾರತ ಪಾಕಿಸ್ತಾನವಾಗದೆಯೇ ಹಾಗೆಯೇ ಉಳಿದಿದೆ. ಆರ್‌ಎಸ್‌ಎಸ್ ಇಲ್ಲದಿದ್ದರೆ ಸಚಿವ ಪ್ರಿಯಾಂಕ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಇರುವ ಜಾಗ ಪಾಕಿಸ್ತಾನವಾಗಿಬಿಡುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಕೂಡ ಆರ್‌ಎಸ್‌ಎಸ್ ಹಿನ್ನೆಲೆಯಿಂದಲೇ ಬಂದಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆಯನ್ನು ಚೆನ್ನಾಗಿ ಹಾಡುತ್ತಾರೆ. ಡಿ.ಕೆ.ಶಿವಕುಮಾರ್ ಎಚ್ಚರಿಕೆಯ ನಡೆ ಇಡುತ್ತಿದ್ದಾರೆ. ಅವರ ಚಾಣಾಕ್ಷತನದಿಂದ ಕೆಲಸ ಮಾಡುತ್ತಿದ್ದಾರೆ. ನವೆಂಬರ್‌ನಲ್ಲಿ ಕ್ರಾಂತಿಯಾಗಿ ಕಾಂಗ್ರೆಸ್ ಸರ್ಕಾರ ತೊಲಗಲಿ ಎಂದರು.
ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್