ಧಾರವಾಡ : ಲವ್ ಜಿಹಾದ್ ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸಿಪಿಐ ಶಿವಕುಮಾರ್ ಲೋಹಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಧಾರವಾಡ ಗ್ರಾಮೀಣ ವೃತ್ತದ ಸಿಪಿಐ ಶಿವಕುಮಾರ್ ಅಮಾನತುಗೊಳಿಸಲಾಗಿದೆ.
ಪ್ರೀತಿಸುವ ನಾಟಕವಾಡಿ ಲವ್ ಜಹಾದ್ಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಘಟನೆಯಿಂದ ನೊಂದಿದ್ದ ದಲಿತ ಸಮುದಾಯದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಹಾಗಾಗಿ ಕರ್ತವ ಲೋಪದ ಹಿನ್ನೆಲೆಯಲ್ಲಿ ಇದೀಗ ಶಿವಕುಮಾರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಘಟನೆ ಖಂಡಿಸಿ ಎಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪೊಲೀಸರ ನಿರ್ಲಕ್ಷದ ಬಗ್ಗೆ ಆರೋಪ ಮಾಡಲಾಗಿತ್ತು ಈ ಹಿನ್ನಲೆ ಸಿಪಿಐ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.








