ಗದಗ : ಗದಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಇದೀಗ ಅವಾಂತರ ಸೃಷ್ಟಿಯಾಗಿದ್ದು ಹಳ್ಳದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಒಬ್ಬರು ಕೊಚ್ಚಿ ಹೋಗಿರುವ ಘಟನೆ ವರದಿಯಾಗಿದೆ ಇಬ್ಬರೂ ಪ್ರಣಾಪಾಯದಿಂದ ಪಾರಾಗಿದ್ದು ಮಹಿಳಾ ಸಿಬ್ಬಂದಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.
ಹೌದು ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮಳೆಗೆ ಮೀಸೆನ್ ಕೇರಿ ಹಳ್ಳ ತುಂಬಿ ಹರಿಯುತ್ತಿದೆ. ಘಟನೆಯಲ್ಲಿ ಇಬ್ಬರು ಬಚಾವಾಗಿದ್ದು ಮಹಿಳಾ ಸಿಬ್ಬಂದಿ ಕೊಚ್ಚಿ ಹೋಗಿದ್ದಾರೆ. ಬೆಳವಣಿಕಿ ಯಾ-ಸ ಹಡಗಲಿ ಬಳಿ ಈ ಒಂದು ಘಟನೆ ಸಂಭವಿಸಿದೆ