ಹಾಸನ : ಅಪಘಾತದಲ್ಲಿ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ್ದಕ್ಕೆ ಇದೀಗ, ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್ ಮಾಡಲಾಗಿದೆ.
ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್ ಆದೇಶದ ಹಿನ್ನೆಲೆ ವಕೀಲರ ತಂಡ ಬಸ್‌ನ್ನು ಸೀಜ್ ಮಾಡಿದೆ. ಬಸ್‌ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಜನ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಬಸ್ ಸೀಜ್ ಮಾಡಲಾಗಿದೆ.
ಚಿಕ್ಕಮಂಗಳೂರು ಡಿಪೋಕ ಸೇರಿದ 2 ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ಜಪ್ತಿ ಮಾಡಲಾಗಿದೆ. 2023ರಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಮತ್ತು ರವಿಕಿರಣ್ ಮೃತಪಟ್ಟಿದ್ದರು. 32 ಲಕ್ಷ ರೂಪಾಯಿ ಪರಿಹಾರ ನೀಡಲು ಚನ್ನರಾಯಪಟ್ಟಣ ಕೋರ್ಟ್ ಆದೇಶಿಸಿತ್ತು. ನ್ಯಾಯಾಲಯ ಆದೇಶ ನೀಡಿದರು ಸಹ ಪರಿಹಾರ ನೀಡಲು ವಿಳಂಬ ಮಾಡಿದ್ದ ಹಿನ್ನೆಲೆಯಲ್ಲಿ ಇದೀಗ ಚಿಕ್ಕಮಗಳೂರು ಡಿಪೋಗೆ ಸೇರಿದ ಯಾವುದೇ ಬಸ್ ಜಪ್ತಿಗೆ ಆದೇಶ ನೀಡಿದೆ ಕೋರ್ಟ್ ಆದೇಶ ಹಿನ್ನೆಲೆ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಸಿ ಮಾಡಲಾಗಿದೆ ಪ್ರಯಾಣಿಕರನ್ನು ಕೆಳಗಿಳಿಸಿ KA18 F1040 ಬಸ್ ಅನ್ನು ಜಪ್ತಿ ಮಾಡಲಾಗಿದೆ.








