ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಇಂದು ನಾಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ನಾಗಮಂಗಲದ ಸುತ್ತಮುತ್ತಲು ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ.
ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ವರ್ಷ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಕೋಮುಗಲಭೆಯ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟವಾಗಿತ್ತು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಆಡಳಿತದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ನಾಗಮಂಗಲದಲ್ಲಿ ದಾರಿಯುದ್ದಕ್ಕೂ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.