ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದಂತ ಆಟೋ ಚಾಲಕನೊಬ್ಬನನ್ನು ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ, ಆತನ ಮೇಲೆ ಸಂಚಾರ ಪೊಲೀಸರು ಹಲ್ಲೆ ಕೂಡ ಮಾಡಿದ್ದರು. ಈ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ವಿಚಾರ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ಬಂದಿದ್ದು, ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಅದರಂತೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಂಡಿರುತ್ತಾರೆ ಎಂಬುದಾಗಿ ತಿಳಿಸಿದೆ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ. pic.twitter.com/m5eidbJkj0
— DIPR Karnataka (@KarnatakaVarthe) October 18, 2025
BREAKING: ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ದಂಪತಿಗೆ ಗಂಡು ಮಗು ಜನನ | Actor Parineeti Chopra
99% ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಪ್ರಮುಖವಾಗಿ ಇವೇ ಕಾರಣ: ಅಧ್ಯಯನ | Heart Attacks