ಮಂಗಳೂರು : ಮಂಗಳೂರಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವತಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಪಾಂಡೇಶ್ವರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಗಣೇಶ್, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಮತ್ತು ರಾಮಚಂದ್ರ ಬಂಧಿತ ಆರೋಪಿಗಳು. ಸೋಮವಾರ ಯುವತಿ ಹಾಗೂ ಯುವಕ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾತನಾಡುತ್ತ ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಏಳೆಂಟು ಮಂದಿಯ ತಂಡ ತಡೆದು ಜೀವ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಯುವತಿ ಪೊಲೀಸ್ ದೂರು ನೀಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.