ಮುಂಬೈ: ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಸ್ಥಳದಲ್ಲಿ ಈ ವರ್ಷ ಸುಮಾರು 262 ಅಪಘಾತಗಳು ಸಂಭವಿಸಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಥಾಣೆಯ ಘೋಡ್ಬಂದರ್ ಮತ್ತು ಪಾಲ್ಘರ್ ಜಿಲ್ಲೆಯ ದಪ್ಚಾರಿ ನಡುವಿನ ಮುಂಬೈ-ಅಹಮದಾಬಾದ್ ಹೆದ್ದಾರಿಯ 100 ಕಿಮೀ ವ್ಯಾಪ್ತಿಯಲ್ಲಿ ಈ ವರ್ಷ 262 ಅಪಘಾತಗಳಿಗೆ ಸಾಕ್ಷಿಯಾಗಿದೆ. ಇದರಿಂದಾಗಿ ಸುಮಅರು 62 ಜನರು ಸಾವನ್ನಪ್ಪಿದ್ದಾರೆ ಮತ್ತು 192 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಾಲಕನ ಅತಿಯಾದ ವೇಗ, ರಸ್ತೆಯ ಕಳಪೆ ನಿರ್ವಹಣೆ, ಸರಿಯಾದ ಸೂಚನಾ ಫಲಕಗಳ ಕೊರತೆ ಮತ್ತು ವೇಗ ನಿಯಂತ್ರಣ ಕ್ರಮಗಳ ಕೊರತೆಯು ಹೆಚ್ಚಿನ ಸಂಖ್ಯೆಯ ಅಪಘಾತಗಳಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
Good News : ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ