ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಈದ್ ಉನ್ನಬಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮ ಪ್ರಚಾರಕರು ಭಾಗವಹಿಸುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ಸಂಘಟಕರಿಗೆ ಪೊಲೀಸ್ ಆಯುಕ್ತರ ಮೂಲಕ ಮಾಹಿತಿ ನೀಡಲಾಗಿದೆ.ವೀಸಾ ನಿಯಮ ಉಲ್ಲಂಘನೆ ಮಾಡಿದಂತೆ ಕ್ರಮಕ್ಕೆ ಸೂಚಿಸಲಾಗಿದೆ. ಈ ವೇಳೆ ವಿದೇಶಿ ಪ್ರಚಾರಕರು ಭಾಷಣ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಒಂದು ಕಾರ್ಯಕ್ರಮದಲ್ಲಿ ವಿದೇಶಿ ಧರ್ಮ ಗುರುಗಳು ಭಾಗವಹಿಸಲು ಅವಕಾಶ ಇಲ್ಲ. ಅಲ್ಲದೆ ಭಾಷಣವನ್ನು ಮಾಡುವಂತಿಲ್ಲ ನಿಮ್ಮ ಉಲ್ಲಂಘಿಸಬಾರದು ಎಂದು ಈಗಾಗಲೇ ಸಂಘಟಕ ಗರಿಗೆ ಸೂಚಿಸಲಾಗಿದೆ ಇಡೀ ಕಾರ್ಯಕ್ರಮದ ಮೇಲೆ ರಾಜ್ಯ ಸರ್ಕಾರ ನಿಗಾ ಇಡಲಿದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ. ವಿರೋಧ ಪಕ್ಷಗಳಿಗಿಂತ 10 ಪಟ್ಟು ನಮಗೆ ಹೆಚ್ಚು ಜವಾಬ್ದಾರಿ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.